ಭೀಕರ ಅಪಘಾತ, ಒಬ್ಬ ಸ್ಥಳದಲ್ಲೇ ಸಾವು; ಅಪಘಾತಕ್ಕೀಡಾದ ಟ್ಯಾಂಕರ್​ನಿಂದ ಪೆಟ್ರೋಲ್​ ತುಂಬಿಕೊಂಡ ಜನ!

Car Accident
Published on

ಬೆಳಗಾವಿ: ಪೆಟ್ರೋಲ್ ಟ್ಯಾಂಕರ್ ಮತ್ತು ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಇಂಥದ್ದೊಂದು ಭೀಕರ ಅಪಘಾತ ಸಂಭವಿಸಿದೆ.

ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣ ಹೊರವಲಯದಲ್ಲಿ ಈ ಅಪಘಾತ ಸಂಭವಿಸಿದೆ. ಹುಬ್ಬಳ್ಳಿಯ ಶಾಂತಿನಗರ ನಿವಾಸಿ ಸಾಗರ ಕೇಶನ್ನವರ (34) ಸಾವಿಗೀಡಾದ ವ್ಯಕ್ತಿ. ಇವರು ಸವದತ್ತಿ ರೇಣುಕಾ ಯಲ್ಲಮ್ಮ ದೇವಿ ದರ್ಶನಕ್ಕೆ ಬಂದಿದ್ದರು. ಇವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಪೆಟ್ರೋಲ್ ಟ್ಯಾಂಕರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದೆ.

ಈ ಅಪಘಾತದಲ್ಲಿ ಇನ್ನು ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತಕ್ಕೀಡಾದ ಪೆಟ್ರೋಲ್ ಟ್ಯಾಂಕರ್‌ನಿಂದ ಜನರು ಪೆಟ್ರೋಲ್ ತುಂಬಿಸಿಕೊಂಡು ಸನ್ನಿವೇಶವೂ ಕಂಡುಬಂತು. ಟ್ರ್ಯಾಕ್ಟರ್ ಸಹಾಯದಿಂದ ಪೆಟ್ರೋಲ್ ಟ್ಯಾಂಕರ್ ಮೇಲೆತ್ತಲು ಹರಸಾಹಸ ನಡೆಸಲಾಯಿತು. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net