

ಪಡುಬಿದ್ರಿ: ಕಾಪು ಪೊಲಿಪು ಜಂಕ್ಷನ್‌ನಲ್ಲಿ ಬುಧವಾರ ರಾತ್ರಿ ಸ್ಕೂಟರ್‌ಗೆ ಕಾರು ಡಿಕ್ಕಿಯಾಗಿ ಸ್ಕೂಟರ್ ಸವಾರ ಕಾಪು ಉಳಿಯಾರಗೋಳಿಯ ಚೇತನ್(36) ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಅಪಘಾತದಿಂದ ಸ್ಕೂಟರ್ ಸಹಿತ ರಸ್ತೆಗೆ ಬಿದ್ದು ಗಾಯಗೊಂಡ ಅವರು ಉಡುಪಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯಿಂದ ವಾಹನಗಳೆರಡು ಜಖಂಗೊಂಡಿದ್ದು, ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾಪು ಠಾಣೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ