

ಮಂಗಳೂರು: ನಗರದ ಹೊರ ವಲಯದ ಚೆಂಬುಗುಡ್ಡೆ ಬಳಿ ಶನಿವಾರ ಬೆಳಗ್ಗೆ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದು ಸಹಸವಾರರೊಬ್ಬರು ಮೃತಪಟ್ಟಿದ್ದಾರೆ.
ಅಬ್ಬಾಸ್ (58) ಅವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಸ್ಕೂಟರ್ ಸವಾರ ನೌಶಾದ್ ಗಂಭೀರ ಗಾಯಗೊಂಡಿದ್ದಾರೆ.
ತೊಕ್ಕೊಟ್ಟು ಕಡೆಯಿಂದ ಕುತ್ತಾರ್ ಕಡೆಗೆ ಹೋಗುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ತೀರಾ ಬಲ ಭಾಗದಲ್ಲಿ ಚಲಾಯಿಸಿಕೊಂಡು ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್ ಸಮೇತ ಸವಾರ ಹಾಗೂ ಸಹಸವಾರ ರಸ್ತೆಗೆ ಬಿದ್ದಿದ್ದರು. ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.