ಕಾರು - ಟಿಪ್ಪರ್ ಅಪಘಾತಕ್ಕೆ ನಾಲ್ಕು ಮಂದಿ ಗಂಭೀರ

PTR_25 JULY_3
Published on

ವಿಟ್ಲ: ಮಾಣಿ- ಮೈಸೂರು ಹೆದ್ದಾರಿಯ ಮಿತ್ತೂರು ಸಮೀಪದ ಪರ್ಲೋಟ್ಟುಎಂಬಲ್ಲಿ ಕಾರು ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಮುಂಬೈ ಮೂಲದ ಪ್ರಯಾಣಿಕರಾಗಿದ್ದು, ಮಂಗಳೂರುನಿಂದ ಮೈಸೂರಿಗೆ ತೆರಳುತ್ತಿದ್ದಾಗ ಪುತ್ತೂರು ಕಡೆಯಿಂದ ಮಂಗಳೂರಿಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸಹಿತ ನಾಲ್ವರು ಗಾಯಗೊಂಡಿದ್ದು, ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯುಂಟಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net