ಭೀಕರ ಅಪಘಾತ: ಕಾರಿಗೆ ಲಾರಿ ಗುದ್ದಿ, ನಾಲ್ವರು ಸ್ಥಳದಲ್ಲೇ ಸಾವು...

Car Accident
Published on

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಸಂಚಾರ ಠಾಣಾ ವ್ಯಾಪ್ತಿಯ ಬನ್ನೇರುಘಟ್ಟ-ತುಮಕೂರು ರಸ್ತೆ ಬಳಿಯ ನೈಸ್ ರಸ್ತೆಯಲ್ಲಿ ಕಾರಿಗೆ ಲಾರಿ ಡಿಕ್ಕಿ ಹೊಡೆದು ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೊಮ್ಮನಹಳ್ಳಿಯ ನಿವಾಸಿ ಫಾಸಿಲ್ ಸೇರಿ ನಾಲ್ವರು ಮೃತಪಟ್ಟಿದ್ದಾರೆ.

ಬನ್ನೇರುಘಟ್ಟ-ತುಮಕೂರು ರಸ್ತೆ ಬಳಿಯ ಪುರವಂಕರ ಅಪಾರ್ಟ್‌ಮೆಂಟ್ ಸಮೀಪ ನಿಂತಿದ್ದ ಕಾರಿಗೆ ಹಿಂದಿನಿಂದ ಬಂದ ಟ್ರಕ್ ಗುದ್ದಿತ್ತು. ಇದರಿಂದ ಕಾರುಗಳ ಮಧ್ಯೆ ಸರಣಿ ಅಪಘಾತ ಸಂಭವಿಸಿದೆ. ಪರಿಣಾಮ ವ್ಯಾಗನರ್ ಕಾರಿನಲ್ಲಿದ್ದ ಫಾಸಿಲ್, ಮತ್ತೊಬ್ಬ ವ್ಯಕ್ತಿ ಹಾಗೂ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.

ವಾರಾಂತ್ಯ ಕರ್ಫ್ಯೂ ಇದ್ದ ಹಿನ್ನೆಲೆಯಲ್ಲಿ ಫಾಸಿಲ್ ತಮ್ಮ ಕುಟುಂಬಸ್ಥರ ಬೊಮ್ಮನಹಳ್ಳಿಯಿಂದ ಊರಿಗೆ ತೆರಳಿದ್ದರು. ಕುಮಾರಸ್ವಾಮಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net