ಭೀಕರ ರಸ್ತೆ ಅಪಘಾತ: ಕಾರಿನಲ್ಲಿದ್ದ ಮಗು ಸೇರಿ ಗಂಡ,ಹೆಂಡತಿ ಸ್ಥಳದಲ್ಲೇ ಸಾವು

Accident
Published on

ತುಮಕೂರು: ಲಾರಿ- ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಗಂಡ ,ಹೆಂಡತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ತಾಲೂಕಿನ ಬಿಸೇಗೌಡನದೊಡ್ಡಿಯಲ್ಲಿ ಮಂಗಳವಾರ ನಡೆದಿದೆ.

ಮೃತ ದಂಪತಿ ಚನ್ನಪಟ್ಟಣ ಮೂಲದವರಾಗಿದ್ದು, ಹುಲಿಯೂರುದುರ್ಗ‌ ಕಡೆಯಿಂದ ಮದ್ದೂರು ಕಡೆಗೆ ಕಾರಿನಲ್ಲಿ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾರಿಗೆ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಗಂಡ ಹೆಂಡತಿ ಹಾಗೂ ಮಗು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net