ಶಾಲೆ-ಗ್ರಾಮದ ಕೀರ್ತಿ ಹೆಚ್ಚಿಸಲು ಶ್ರಮಿಸಿ

Material Exhibition
ಕಾರಟಗಿ ತಾಲೂಕಿನ ಮೈಲಾಪುರದಲ್ಲಿ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಟಾರ್ಗೆಟ್ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಗ್ರಾಪಂ ಅಧ್ಯಕ್ಷ ವೀರೇಶ್ ಉದ್ಘಾಟಿಸಿದರು. ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಕುರ್ತಕೋಟಿ, ಎಸ್ಡಿಎಂಸಿ ಉಪಾಧ್ಯಕ್ಷ ಯಮನಗೌಡ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಹನುಮಂತಪ್ಪ ತೊಂಡಿಹಾಳ್ ಇದ್ದರು.
Published on

ಕಾರಟಗಿ: ವಿದ್ಯಾರ್ಥಿ ಜೀವನ ಬಂಗಾರವಿದ್ದಂತೆ. ಅದನ್ನು ಪ್ರತಿಯೊಬ್ಬ ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮೈಲಾಪುರ ಗ್ರಾಪಂ ಅಧ್ಯಕ್ಷ ವೀರೇಶ್ ಹೇಳಿದರು.

ತಾಲೂಕಿನ ಮೈಲಾಪುರದ ಮಂಜುನಾಥ್ ಗೋನಾಳ್ ಸ್ಮಾರಕ ಸರ್ಕಾರಿ ಪ್ರೌಢಶಾಲೆಯಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ ಟಾರ್ಗೆಟ್ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಾಲಾ ಹಂತದಲ್ಲಿ ಮಕ್ಕಳು ಕಲಿಯತ್ತ ಗಮನ ಹರಿಸಬೇಕು. ಪಠ್ಯದ ಜತೆಗೆ ಇತರ ಚಟುವಟಿಕೆಗಳಾದ ಕ್ರೀಡೆ, ಸಾಹಿತ್ಯ, ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳ ಉಪಯೋಗ ಪಡೆಯುವಂತೆ ಸಲಹೆ ನೀಡಿದರು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಬಸವರಾಜ ಕುರ್ತಕೋಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಎಂಸಿ ಉಪಾಧ್ಯಕ್ಷ ಯಮನಗೌಡ, ಸರ್ಕಾರಿ ನೌಕರರ ಸಂಘದ ತಾಲೂಕಾಧ್ಯಕ್ಷ ಹನುಮಂತಪ್ಪ ತೊಂಡಿಹಾಳ್, ರಾಜ್ಯ ಪರಿಷತ್ ಸದಸ್ಯ ಮಂಜುನಾಥ್ ಸ್ವಾಮಿ, ನಿರ್ದೇಶಕ ಹನುಮೇಶ, ಮುಖ್ಯಶಿಕ್ಷಕ ಜಗದೀಶ, ಪಿಡಿಒ ಸೈಯದ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net