ಕಾರ್ಬೆವ್ಯಾಕ್ಸ್ ಲಸಿಕೆ ಲಭ್ಯ

Cervical Cancer Vaccine
Published on

ಶಿವಮೊಗ್ಗ: ಕರೊನಾ ನಿರೋಧಕ ಲಸಿಕೆ ಪಡೆಯದಿರುವ 60 ವರ್ಷ ಮೇಲ್ಪಟ್ಟವರು, ರೋಗ ನಿರೋಧಕಶಕ್ತಿ ಕಡಿಮೆ ಇರುವವರು, ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತೆಯರು ಜಿಲ್ಲಾಸ್ಪತ್ರೆ ಇಲ್ಲವೇ ತಾಲೂಕು ಆಸ್ಪತ್ರೆಗಳಲ್ಲಿ ಕಾರ್ಬೆವ್ಯಾಕ್ಸ್ ಲಸಿಕೆ ಪಡೆಯುವಂತೆ ಜಿಲ್ಲಾ ಲಸಿಕಾಧಿಕಾರಿ ಡಾ.ನಾಗರಾಜ ನಾಯ್ಕ ತಿಳಿಸಿದ್ದಾರೆ. ಜಿಲ್ಲೆಗೆ 820 ಡೋಸ್ ಕಾರ್ಬೆವ್ಯಾಕ್ಸ್ ಲಸಿಕೆ ಸರಬರಾಜಾಗಿದೆ. ಕೋವಿಶೀಲ್ಡ್ ಅಥವಾ ಕೊವ್ಯಾಕ್ಸಿನ್ ಲಸಿಕೆಯ ಎರಡನೇ ಡೋಸ್ ಪಡೆದು ಆರು ತಿಂಗಳು ಅಥವಾ 26 ವಾರ ಪೂರೈಸಿದವರು ಕಾರ್ಬೆವ್ಯಾಕ್ಸ್ ಲಸಿಕೆ ಪಡೆಯಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net