ಫಲಾನುಭವಿಗಳಿಗೆ ಸದ್ಯಕ್ಕಿಲ್ಲ ಹೊಸ ಬಿಪಿಎಲ್

card
Published on

ಮಡಿಕೇರಿ:

ಹೊಸ ಬಿಪಿಎಲ್ ಪಡಿತರ ಚೀಟಿಗಳು ಸದ್ಯಕ್ಕಂತೂ ಸಿಗುವ ಲಕ್ಷಣಗಳಿಲ್ಲ. ಕೇಂದ್ರ ಸರ್ಕಾರ ನಿಗದಿ ಮಾಡಿರುವುದಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಫಲಾನುಭವಿಗಳು ರಾಜ್ಯದಲ್ಲಿ ಇರುವ ಕಾರಣಕ್ಕೆ ಹಾಲಿ ಬಂದಿರುವ ಅರ್ಜಿಗಳನ್ನು 'ಪೆಂಡಿAಗ್'ನಲ್ಲಿ ಇಡಲಾಗಿದೆ.

ಅನರ್ಹರನ್ನು ಗುರುತಿಸಿ ಅವರ ರೇಷನ್ ಕಾರ್ಡ್ಗಳು ರದ್ದಾದಲ್ಲಿ ಮಾತ್ರ ಅಷ್ಟೇ ಪ್ರಮಾಣದಲ್ಲಿ ಹೊಸ ಪಡಿತರ ಚೀಟಿ ಕೊಡಲು ಸಾಧ್ಯ ಎನ್ನುತ್ತಾರೆ ಆಹಾರ, ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರಗಳು ಹಾಗೂ ಕಾನೂನು ಮಾಪನಾ ಶಾಸ್ತç ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ. ಆರ್ಥಿಕವಾಗಿ ದುರ್ಬಲರಾಗಿರುವ ಮತ್ತು ಹಿಂದುಳಿದ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸುವ ಸಲುವಾಗಿ ಸರ್ಕಾರ ಬಿಪಿಎಲ್ ಕಾರ್ಡ್ಗಳನ್ನು ವಿತರಣೆ ಮಾಡುತ್ತದೆ.

ಸರ್ಕಾರದ ವಿವಿಧ ಯೋಜನೆಗಳಿಗೆ ಮಾನದಂಡವಾಗಿಯೂ ಬಿಪಿಎಲ್ ಕಾರ್ಡ್ ಬಳಕೆಯಲ್ಲಿದೆ. ಸರ್ಕಾರದ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಗೃಹಲಕ್ಷಿö್ಮÃ ಯೋಜನೆಯ ಫಲಾನುಭವಿ ಆಗಬೇಕಾದರೆ ರೇಷನ್ ಕಾರ್ಡ್ನಲ್ಲಿ ಮನೆಯ ಯಜಮಾನಿಯಾಗಿ ಹೆಸರು ಇರಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಲು ಕೂಡ ಬಿಪಿಎಲ್ ಕಾರ್ಡ್ ಬೇಕೇ ಬೇಕು. ಹಾಗಾಗಿ ಬಿಪಿಎಲ್ ಕಾರ್ಡ್ ಹೊಂದಿಕೊಳ್ಳಲು ಜನ ಸಾಮಾನ್ಯರು ಆದ್ಯತೆ ಕೊಡುತ್ತಿದ್ದಾರೆ.

ಆದರೆ ರಾಜ್ಯದಲ್ಲಿ ಈಗ ಹೊಸ ಬಿಪಿಎಲ್ ಪಡಿತರ ಚೀಟಿಗಳನ್ನು ಕೊಡುವುದನ್ನು ನಿಲ್ಲಿಸಲಾಗಿದೆ. ಇದಕ್ಕಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವವರು ತಮ್ಮ ಸರದಿಗಾಗಿ ಕಾಯುತ್ತಿದ್ದಾರೆ. ಹೊಸ ಅರ್ಜಿಗಳನ್ನಂತೂ ತೆಗೆದುಕೊಳ್ಳುತ್ತಲೇ ಇಲ್ಲ. ಕೇಂದ್ರ ಸರ್ಕಾರದ ರಾಷ್ಟಿçÃಯ ಆಹಾರ ಭದ್ರತಾ ಕಾಯಿದೆ 2023 ಪ್ರಕಾರ ರಾಜ್ಯದಲ್ಲಿ 4,01,93,000 ಫಲಾನುಭವಿಗಳಿಗೆ ಪಡಿತರ ವಿತರಿಸುವ ಗುರಿ ನಿಗದಿಪಡಿಸಲಾಗಿದೆ. ಆದರೆ 4,53,89,504 ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಿಸಲಾಗುತ್ತಿದೆ. ಹಾಗಾಗಿ ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಿತಿ ದಾಟಿರುವುದರಿಂದ ಹೊಸ ಬಿಪಿಎಲ್ ಕಾರ್ಡ್ಗಳನ್ನು ವಿತರಣೆ ಮಾಡುವುದನ್ನು ಸ್ಥಗಿತಗೊಳಿಸಲಾಗಿದೆ.

ಹೊಸ ಆದ್ಯತಾ ಪಡಿತರ ಚೀಟಿಗಾಗಿ ರಾಜ್ಯದಲ್ಲಿ ಒಟ್ಟು 3,27,209 ಅರ್ಜಿಗಳು ಸಲ್ಲಿಕೆಯಾಗಿದೆ. ಕೊಡಗಿನಲ್ಲಿ 1,613 ಫಲಾನುಭವಿಗಳು ಅರ್ಜಿ ಸಲ್ಲಿಸಿ ನೂತನ ಕಾರ್ಡ್ಗಾಗಿ ಕಾಯುತ್ತಿದ್ದಾರೆ. ಆದರೆ ಇವರಿಗೆ ಸದ್ಯಕ್ಕಂತೂ ಬಿಪಿಎಲ್ ಕಾರ್ಡ್ಗಳು ಸಿಗುವ ಲಕ್ಷಣಗಳು ಕಾಣುತ್ತಿಲ್ಲ. ಅನರ್ಹ ಕಾರ್ಡ್ದಾರರನ್ನು ಪತ್ತೆ ಹಚ್ಚಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದು, ಇದೊಂದು ಹಂತಕ್ಕೆ ಬಂದ ನಂತರ ರದ್ದಾಗಿರುವ ಅನರ್ಹ ಕಾರ್ಡ್ಗಳಷ್ಟೇ ಸಂಖ್ಯೆಯಲ್ಲಿ ಹೊಸ ಬಿಪಿಎಲ್ ಕಾರ್ಡ್ಗಳ ವಿತರಣೆ ನಡೆಯಲಿದೆ.

ಬಿಪಿಎಲ್ ಕಾರ್ಡ್ಗಳು ಅನರ್ಹರ ಪಾಲಾಗುವುದನ್ನು ತಪ್ಪಿಸಲು ನೂತನ ಕಾರ್ಡ್ಗಳನ್ನು ನೀಡುವ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸಲು ಕೂಡ ಸರ್ಕಾರ ನಿರ್ಧರಿಸಿದೆ. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ ನಂತರ ಅರ್ಜಿದಾರ ಬಿಪಿಎಲ್ ಕಾರ್ಡ್ಗೆ ಅರ್ಹ ಎಂದು ಸಾಬೀತಾದರೆ ಮಾತ್ರ ಬಿಪಿಎಲ್ ಕಾರ್ಡ್ ವಿತರಿಸುವ ತೀರ್ಮಾನಕ್ಕೆ ಬರಲಾಗಿದೆ. ಮತ್ತೊಂದು ಕಡೆ ರಾಜ್ಯದಲ್ಲಿ ಆದ್ಯೇತರ ಪಡಿತರ ಚೀಟಿಗಳಿಗೆ ರಾಜ್ಯದಲ್ಲಿ ಒಟ್ಟು 1,30,694 ಅರ್ಜಿಗಳು ಸಲ್ಲಿಕೆ ಆಗಿದ್ದರೆ, ಕೊಡಗಿನಲ್ಲಿ 3,514 ಅರ್ಜಿಗಳು ಸರದಿಯಲ್ಲಿದೆ.

ಬಿಪಿಎಲ್ ಸೇರಿದಂತೆ ಆದ್ಯತಾ ಪಡಿತರ ಚೀಟಿಗಾಗಿ ಈಗಾಗಲೇ ಅರ್ಜಿ ಸಲ್ಲಿಸಿರುವವರಲ್ಲಿ ಸರ್ಕಾರದ ಮಾನದಂಡ ಉಲ್ಲಂಘಿಸಿರುವುದು ಕಂಡು ಬಂದರೆ ಅಂಥ ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಒಂದು ವೇಳೆ ಮಾನದಂಡ ಉಲ್ಲಂಘಿಸಿ ಆದ್ಯತಾ ಪಡಿತರ ಚೀಟಿಗಳನ್ನು ಪಡೆದುಕೊಂಡಿದ್ದರೆ ಅಂಥವರ ಕಾರ್ಡ್ಗಳು ರದ್ದಾಗಲಿವೆ. ಜತೆಗೆ ಸುಳ್ಳು ಮಾಹಿತಿ ಕೊಟ್ಟು ಕಾರ್ಡ್ ಪಡೆದುಕೊಂಡಿರುವುದಕ್ಕೆ ದಂಡ ವಿಧಿಸುವ ಸಾಧ್ಯತೆಗಳು ಕೂಡ ಇದೆ. ಕೊಡಗಿನಲ್ಲಿ ಪ್ರಸ್ತುತ 9,341 ಅಂತ್ಯೋದಯ ಅನ್ನ ಯೋಜನೆಯ ಕಾರ್ಡ್ಗಳಿದ್ದು, 30,305 ಜನ ಫಲಾನುಭವಿಗಳು ಈ ಕಾರ್ಡ್ನ ಪ್ರಯೋಜನ ಪಡೆಯುತ್ತಿದ್ದಾರೆ. 1,00,814 ಬಿಪಿಎಲ್ ಕಾರ್ಡ್ಗಳಿದ್ದು, 3,12,824 ಫಲಾನುಭವಿಗಳು ಕಾರ್ಡ್ ಸವಲತ್ತು ಪಡೆಯುತ್ತಿದ್ದಾರೆ.

ಕಾರ್ಡ್ಗೆ ಯಾಕೆ ಮಹತ್ವ ?

ಸರ್ಕಾರದ ವಿವಿಧ ಯೋಜನೆಗಳಿಗೆ ಮಾನದಂಡವನ್ನಾಗಿ ಬಿಪಿಎಲ್ ಕಾರ್ಡ್ಗಳನ್ನು ಬಳಸಲಾಗುತ್ತಾದರೂ ಗೃಹಲಕ್ಷಿö್ಮÃ ಯೋಜನೆ ಜಾರಿಗೆ ಬಂದ ನಂತರ ಇದರ ಮಹತ್ವ ಜಾಸ್ತಿಯಾಗಿದೆ. ಹಾಗಾಗಿ ಸಹಜವಾಗಿಯೇ ಬಿಪಿಎಲ್ ಕಾರ್ಡ್ಗೆ ಬೇಡಿಕೆಯೂ ಹೆಚ್ಚಾಗಿದೆ. ಇದನ್ನು ಹೊರತುಪಡಿಸಿದಂತೆ ಆದ್ಯತಾ ಪಡಿತರ ಚೀಟಿ ಹೊಂದಿರುವವರಲ್ಲಿ ಅಂತ್ಯೋದಯ ಅನ್ನ ಯೋಜನೆ ಕಾರ್ಡ್ ಹೊಂದಿರುವವರಿಗೆ ಪ್ರತಿ ಕಾರ್ಡ್ಗೆ 21ಕೆಜಿ ಅಕ್ಕಿ ಮತ್ತು ಸ್ಥಳೀಯ ಬಳಕೆಗೆ ಅನುಗಣವಾಗಿ 14 ಕೆಜಿ ರಾಗಿ ಅಥವಾ ಜೋಳ ಸೇರಿ ಒಟ್ಟು 35 ಕೆಜಿ ಆಹಾರ ಧಾನ್ಯ ಉಚಿತವಾಗಿ ವಿತರಿಸಲಾಗುತ್ತಿದೆ. ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಕುಟುಂಬದ ಪ್ರತಿ ಸದಸ್ಯನಿಗೆ 3 ಕೆಜಿ ಅಕ್ಕಿ ಮತ್ತು ಸ್ಥಳೀಯ ಬಳಕೆಗೆ ಅನುಗುಣವಾಗಿ 2 ಕೆಜಿ ರಾಗಿ ಅಥವಾ ಜೋಳ ಉಚಿತವಾಗಿ ಕೊಡಲಾಗುತ್ತಿದೆ.

ಬಿಪಿಎಲ್ ಕಾರ್ಡ್ ಮಾನದಂಡಗಳು

ಬಿಪಿಎಲ್ ಕಾರ್ಡ್ಗಳನ್ನು ವಿತರಿಸಲು ಈಗಾಗಲೇ ಸರ್ಕಾರ ಹಲವು ಮಾನದಂಡಗಳನ್ನು ರೂಪಿಸಿದೆ. ವೇತನವನ್ನು ಗಣನೆಗೆ ತೆಗೆದುಕೊಳ್ಳದೆ ಸರ್ಕಾರದ ಅಥವಾ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು ಅಥವಾ ಸರ್ಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡAತೆ ಎಲ್ಲಾ ಖಾಯಂ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುವ ಎಲ್ಲಾ ಕುಟುಂಬಗಳನ್ನು ಆದ್ಯತಾ ಪಡಿತರ ಚೀಟಿ ಸವಲತ್ತಿನಿಂದ ಹೊರಗಿಡಲಾಗಿದೆ. ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟರ್ ಒಣಭೂಮಿ ಅಥವಾ ಇಷ್ಟೇ ಪ್ರಮಾಣದ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ ನಗರ ಪ್ರದೇಶಗಳಲ್ಲಿ 1,000 ಚದರ ಅಡಿಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆ ಸ್ವಂತವಾಗಿ ಹೊಂದಿರುವವರು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನ, ಟ್ರಾಕ್ಟರ್, ಮಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬ ಹೊರತುಪಡಿಸಿ ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ.ಗಿಂತಲೂ ಹೆಚ್ಚು ಇರುವ ಕುಟುಂಬಗಳು ಕೂಡ ಆದ್ಯತಾ ಪಡಿತರ ಚೀಟಿ ಪಡೆದುಕೊಳ್ಳಲು ಅನರ್ಹವಾಗಿರುತ್ತವೆ.

ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ - 2013ರಡಿ ಫಲಾನುಭವಿಗಳಿಗೆ ಪಡಿತರ ವಿತರಿಸಲು 4,01,93,000 ಗುರಿ ನಿಗಧಿಪಡಿಸಲಾಗಿದೆ. ಆದರೆ ರಾಜ್ಯದಲ್ಲಿ 4,53,89,504 ಫಲಾನುಭವಿಗಳಿಗೆ ಆಹಾರ ಧಾನ್ಯ ವಿತರಿಸಲಾಗಿರುತ್ತದೆ. ಆದ್ದರಿಂದ, ಈಗಾಗಲೇ ಆದ್ಯತಾ ಪಡಿತರ ಚೀಟಿ ಪಡೆದಿರುವವರಲ್ಲಿ ಅನರ್ಹರನ್ನು ಪತ್ತೆ ಹಚ್ಚುವ ಕಾರ್ಯ ನಿರಂತರವಾಗಿ ನಡೆಯುತ್ತಿದ್ದು, ಅನರ್ಹ ಪಡಿತರ ಚೀಟಿಯನ್ನು ರದ್ದು ಪಡಿಸಿದಲ್ಲಿ ಅಷ್ಟೇ ಪ್ರಮಾಣದ ಹೊಸ ಪಡಿತರ ಚೀಟಿ ನೀಡಲು ಅವಕಾಶವಿರುತ್ತದೆ.

ಕೆ.ಹೆಚ್. ಮುನಿಯಪ್ಪ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net