

ಮಡಿಕೇರಿ:
ಜಿಲ್ಲೆಯ ಹೃದ್ರೋಗಿಗಳಿಗೆ ಉಪಯೋಗ ಆಗುವ ನಿಟ್ಟಿನಲ್ಲಿ ಸ್ಥಳೀಯವಾಗಿ ಕಾರ್ಡಿಯಾಕ್ ಯೂನಿಟ್ ಬೇಕು ಎನ್ನುವುದು ಬಹಳ ಹಳೆಯ ಬೇಡಿಕೆ. ಈ ಸಂಬAಧ 2024ರ ಬಜೆಟ್‌ನಲ್ಲಿ ಮಡಿಕೇರಿಗೆ ಹೃದ್ರೋಗ ಘಟಕದ ಘೋಷಣೆ ಆಗಿದ್ದರೂ ಅದಿನ್ನೂ ಕಾರ್ಯರೂಪಕ್ಕೆ ಬಂದಿಲ್ಲ. ಈ ಮಧ್ಯೆ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಲುವಾಗಿ ಶನಿವಾರ (ಆ.23) ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆದಿರುವುದು ಜಿಲ್ಲೆಯ ಜನತೆಯಲ್ಲಿ ಮತ್ತೊಮ್ಮೆ ನಿರೀಕ್ಷೆ ಗರಿಗೆದರುವಂತೆ ಮಾಡಿದೆ.
2011ರ ಜನಗಣತಿ ಪ್ರಕಾರ ಪುಟ್ಟ ಜಿಲ್ಲೆ ಕೊಡಗಿನ ಜನಸಂಖ್ಯೆ 5.5 ಲP್ಷÀ. ಈ ಪ್ರಮಾಣ ಈಗ ಸುಮಾರು 8-9 ಲP್ಷÀ ತಲುಪಿರಬಹುದು. ಆದರೆ ಎಲ್ಲಾ ಬಗೆಯ ಆರೋಗ್ಯ ತೊಂದರೆಗಳಿಗೆ ತುರ್ತು ಸಂದರ್ಭಗಳಲ್ಲಿ ಸೂಕ್ತ ಚಿಕಿತ್ಸೆ ಕೊಡುವ ಸುಸಜ್ಜಿತ ಆಸ್ಪತ್ರೆ ಜಿಲ್ಲೆಯಲ್ಲಿ ಇಲ್ಲ. ಅದರಲ್ಲೂ ಹೃದಯ ಸಂಬAಧಿ ರೋಗಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಹೃದ್ರೋಗಕ್ಕೆ ಮೀಸಲಾದ ಆಸ್ಪತ್ರೆ ಕೊಡಗಿನ ಪಾಲಿಗೆ ಮರೀಚಿಕೆಯಾಗಿಯೇ ಉಳಿದಿದೆ. ಮಡಿಕೇರಿಯಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆ (ಜಿಲ್ಲಾಸ್ಪತ್ರೆ) ಇದ್ದರೂ ತೀವ್ರ ಹÊದಯಾಘಾತದಂಥ ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದೂರದ ಮೈಸೂರು, ಬೆಂಗಳೂರು ಅಥವಾ ಮಂಗಳೂರಿಗೆ ತೆರಳುವ ಅನಿವಾರ್ಯತೆ ಈಗಲೂ ಇದೆ.
ಕೊಡಗಿನಲ್ಲಿ ಹೃದಯ ಸಂಬAಧಿ ರೋಗದಿಂದ ಬಳಲುತ್ತಿರುವವರು ತಪಾಸಣೆ ಮತ್ತು ಚಿಕಿತ್ಸೆಗಾಗಿ ಪರದಾಡಬೇಕಾದ ಸ್ಥಿತಿ ಇದೆ. ಶ್ರೀಮಂತರೂ ದೂರದ ಊರಿನ ದೊಡ್ಡ ಆಸ್ಪತ್ರೆಗೆ ತೆರಳಬಹುದು. ಆದರೆ ದೊಡ್ಡ ಸಂಖ್ಯೆಯಲ್ಲಿ ಇರುವ ಬಡವರು ಸರ್ಕಾರಿ ಆಸ್ಪತ್ರೆಯನ್ನೇ ಅವಲಂಭಿಸಿದ್ದಾರೆ. 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹೃದಯಾಘಾತದಿಂದ 27 ಜನರು ಮೃತಪಟ್ಟಿದ್ದಾರೆ. 2024-25ನೇ ಸಾಲಿನಲ್ಲಿ 32 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಪ್ರಸಕ್ತ ಸಾಲಿನಲ್ಲಿ ಮೂವರು ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಅಂಕಿ-ಅAಶಗಳು ಹೇಳುತ್ತವೆ.
ಹೃದಯ ಸಂಬAಧಿ ರೋಗಗಳಿಗೆ ಚಿಕಿತ್ಸೆ ನೀಡಲು ಜಿಲ್ಲೆಯಲ್ಲಿ ಹೃದ್ರೋಗ ತಜ್ಞರ ಸಂಖ್ಯೆ ಕಡಿಮೆ ಇದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಡಿಕೇರಿ ಬೋಧಕ ಆಸ್ಪತ್ರೆಯಲ್ಲಿ ಹೃದ್ರೋಗಕ್ಕೆ ಸಂಬAಧಿಸಿದAತೆ ತುರ್ತು ಮತ್ತು ಉನ್ನತ ಚಿಕಿತ್ಸೆ ಕೊಡಲು ಸೂಕ್ತವಾದ ಆಧುನಿಕ ವ್ಯವಸ್ಥೆಗಳು ಇಲ್ಲ. ಹಾಗಾಗಿ ಹೃದಯಾಘಾತದಂಥ ಸಂದರ್ಭದಲ್ಲಿ ಇಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನಷ್ಟೇ ಕೊಟ್ಟು ಹೆಚ್ಚಿನ ಚಿಕಿತ್ಸೆಗೆ ಬೇರೆ ಕಡೆಗೆ ಕಳುಹಿಸುವಂತೆ ಇಲ್ಲಿಯ ವೈದ್ಯರು ಸಲಹೆ ಕೊಡುವುದು ಸಾಮಾನ್ಯವಾಗಿದೆ. ಹಾಗಾಗಿ ಇಂಥ ಸಂದರ್ಭಗಳಲ್ಲಿ ಬೇರೆ ಆಸ್ಪತ್ರೆಗೆ ಸಾಗಿಸುವ ಸಂದರ್ಭವೇ ಹಲವರು ಪ್ರಾಣ ಕಳೆದುಕೊಂಡ ಉದಾಹರಣೆಗಳೂ ಇದೆ.
ತಾಲೂಕು ಆಸ್ಪತ್ರೆಗಳಲ್ಲಿ ಡಾ. ಪುನಿತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಯಲ್ಲಿ ಇದೆಯಾದರೂ ಇದು ತತ್‌ಕ್ಷಣದ ಪರಿಹಾರವನ್ನಷ್ಟೇ ಹೃದ್ರೋಗಿಗಳಿಗೆ ಕೊಡುತ್ತದೆ ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿರುವ ಮಾತಾಗಿದೆ.
ಈ ಯೋಜನೆ ಅಡಿಯಲ್ಲಿ ತೀವ್ರ ಹೃದಯಾಘಾತದ ಸಂದರ್ಭಗಳಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರ ಮೇಲೆ ಗಮನ ಕೇಂದ್ರೀಕರಿಸುತ್ತದೆ. ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಟೆನೆಕ್ಟ್ ಪ್ಲಸ್ ಇಂಜೆಕ್ಷನ್‌ಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ, ಇದು ಹೃದಯಾಘಾತದಿಂದ ಪ್ರಾಣಾಪಾಯದಿಂದ ಪಾರಾಗಲು ಸಹಾಯ ಮಾಡುತ್ತದೆ.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಜಯದೇವ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಲಾಗುತ್ತದೆ.
ಜಯದೇವ ಆಸ್ಪತ್ರೆಯಂಥ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸೌಲಭ್ಯಗಳು ಸ್ಥಳೀಯವಾಗಿಯೇ ರೋಗಿಗಳಿಗೆ ಸಿಗುವಂತಾದರೆ ಹೃದಯಾಘಾತದಿಂದ ಸಂಭವಿಸಬಹುದಾದ ಸಾಕಷ್ಟು ಸಾವುಗಳನ್ನು ತಪ್ಪಿಸಬಹುದಾಗಿದೆ. ಈ ನಿಟ್ಟಿನಲ್ಲಿ ಹೃದ್ರೋಗ ಚಿಕಿತ್ಸಾ ಘಟಕ ಸೇರಿದಂತೆ ಕೊಡಗಿಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಬೇಡಿಕೆ ಇಟ್ಟುಕೊಂಡು 2010ರ ಜೂನ್‌ನಲ್ಲಿ ಜಿಲ್ಲೆಯಲ್ಲಿ ದೊಡ್ಡ ಮಟ್ಟದ ಆನ್‌ಲೈನ್ ಅಭಿಯಾನವೇ ನಡೆದಿತ್ತು. ದೇಶ ವಿದೇಶದಲ್ಲಿರುವ ಕೊಡಗು ಮೂಲದವರು ಈ ಅಭಿಯಾನಕ್ಕೆ ಕೈ ಜೋಡಿಸಿದ್ದರು. ಸಿನಿಮಾ ನಟರು, ಕ್ರೀಡಾಪಟುಗಳೂ ಕೊಡಗಿನವರ ಬೇಡಿಕೆಗೆ ಒತ್ತಾಸೆಯಾಗಿ ನಿಂತಿದ್ದರು. ಫೇಸ್‌ಬುಕ್ ಮತ್ತು ಎಕ್ಸ್ನಲ್ಲಿ ಇದೊಂದು ದೊಡ್ಡ ಟ್ರೆಂಡ್ ಕೂಡ ಸೃಷ್ಟಿಸಿತ್ತು.
ಜಿಲ್ಲೆಯ ಜನತೆಯ ಬೇಡಿಕೆಗೆ ಸ್ಪಂದಿಸಿದ ಮಡಿಕೇರಿ ಶಾಸಕ ಡಾ. ಮಂತರ್ ಗೌಡ 2024ರ ಬಜೆಟ್‌ನಲ್ಲಿ ಮಡಿಕೇರಿಗೆ ಹೃದ್ರೋಗ ಘಟಕದ ಘೋಷಣೆ ಆಗುವಂತೆ ನೋಡಿಕೊಂಡಿದ್ದರು. ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಘಟಕ ಕಾರ್ಯಾಚರಣೆ ನಡೆಸಲಿದೆ ಎಂದು ಬಜೆಟ್‌ನಲ್ಲಿ ಹೇಳಲಾಗಿತ್ತು. ಆದರೆ ಇಲ್ಲಿಯ ತನಕವೂ ಮಡಿಕೇರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಕಾರ್ಯಾರಂಭ ಮಾಡಿಲ್ಲ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯ ಸಂಬAಧಿ ರೋಗಿಗಳ ಸಂಖ್ಯೆ ಮತ್ತು ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಶಾಸಕ ಮಂತರ್ ಗೌಡ ಯೋಜನೆ ಜಾರಿಗಾಗಿ ಮತ್ತೆ ಸರ್ಕಾರಕ್ಕೆ ದುಂಬಾಲು ಬಿದ್ದಿದ್ದಾರೆ.
ಈ ಬೆನ್ನಲ್ಲೇ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬAಧ ನಡೆದಿರುವ ಬೆಳವಣಿಗೆ ಪರಮಾರ್ಶಿಸಲು ಶನಿವಾರ (ಆ.23) ಬೆಂಗಳೂರಿನ ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆಯಿತು. ಡಾ. ಮಂತರ್ ಗೌಡ ಸಭೆಯಲ್ಲಿ ಖುದ್ದು ಪಾಲ್ಗೊಂಡು ಯೋಜನೆ ಕಾರ್ಯಗತಗೊಳಿಸುವ ಸಂಬAಧ ಸಚಿವರೊಂದಿಗೆ ಚರ್ಚೆ ನಡೆಸಿದರು. ಶೀಘ್ರವಾಗಿ ಸಚಿವ ಸಂಪುಟ ಸಭೆಯಲ್ಲಿ ಯೋಜನೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಮನವಿ ಮಾಡಿದರು.
ಸಭೆಯಲ್ಲಿ ಯೋಜನೆ ಪ್ರಗತಿ ವಿವರ ಪರಿಶೀಲಿಸಿದ ಸಚಿವ ಡಾ. ಶರಣ ಪ್ರಕಾಶ ಪಾಟೀಲ, ಅತ್ಯಾಧುನಿಕ ತಂತ್ರಜ್ಞಾನದ ಕ್ಯಾತ್ ಲ್ಯಾಬ್ ಸ್ಥಾಪಿಸುವ ಸಂಬAಧ ಅಗತ್ಯ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಿ ಟೆಂಡರ್ ಆಹ್ಚಾನಿಸಲು ಅಧಿಕಾರಿಗಳಿಗೆ ಸೂಚಿಸಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂಟಿ ಕಾರ್ಯದರ್ಶಿ ಡಾ. ವೆಂಕಟೇಶ್ ಮೂರ್ತಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕಿ ಡಾ. ಸುಜಾತ ರಾಥೋಡ್, ರಾಜ್ಯ ಪಿಪಿಪಿ ಕೋಶದ ನಿರ್ದೇಶಕ ಪುರುಷೋತ್ತಮ್ ಸಿಂಗ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕರಾದ ಡಾ.ಎ.ಜೆ. ಲೋಕೇಶ್ ಸೇರಿದಂತೆ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬAಧ ಈಚೆಗೆ ಪ್ರಗತಿ ಪರಿಶೀಲನೆ ಸಭೆ ನಡೆಸಲಾಗಿದೆ. ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಸಂಬAಧ ಚರ್ಚೆ ಮಾಡಲಾಗಿದೆ. ಯೋಜನೆ ಪ್ರಗತಿ ವಿವರವನ್ನು ಪರಿಶೀಲಿಸಿದ ಸಚಿವರು ಅತ್ಯಾಧುನಿಕ ತಂತ್ರಜ್ಞಾನದ ಕ್ಯಾತ್ ಲ್ಯಾಬ್ ಸ್ಥಾಪಿಸುವ ಸಂಬAಧ ಅಗತ್ಯ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಿ ಟೆಂಡರ್ ಆಹ್ಚಾನಿಸಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಡಾ. ಮಂತರ್ ಗೌಡ, ಮಡಿಕೇರಿ ಶಾಸಕ