

ಮಡಿಕೇರಿ:
ಮಡಿಕೇರಿಯಲ್ಲಿ ಇರುವ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಬೋಧಕ ಆಸ್ಪತ್ರೆಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬAಧ ಚಟುವಟಿಕೆ ಬಿರುಸುಗೊಂಡಿದೆ. ಈ ವಿಷಯಕ್ಕೆ ಸಂಬAಧಿಸಿದAತೆ ಕಳೆದ ತಿಂಗಳಷ್ಟೇ ಬೆಂಗಳೂರಿನಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆದಿತ್ತು. ಇದೀಗ ಕಾರ್ಡಿಯಾಕ್ ಯೂನಿಟ್‌ಗೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು 10.89 ಕೋಟಿ ರೂ. ವೆಚ್ಚದಲ್ಲಿ ಖರೀದಿಸಲು ಗುರುವಾರ (ಸೆ.18) ನಡೆದ ರಾಜ್ಯ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಂಡಿರುವುದರಿAದ ಆದಷ್ಟು ಶೀಘ್ರ ಕಾರ್ಡಿಯಾಕ್ ಯೂನಿಟ್ ಆರಂಭವಾಗುವ ಭರವಸೆ ಮೂಡಿಸಿದೆ.
ಹೃದಯ ಸಂಬAಧಿ ರೋಗಗಳಿಗೆ ಚಿಕಿತ್ಸೆ ನೀಡಲು ಪುಟ್ಟ ಜಿಲ್ಲೆ ಕೊಡಗಿನಲ್ಲಿ ಹೃದ್ರೋಗ ತಜ್ಞರ ಸಂಖ್ಯೆ ಕಡಿಮೆ ಇದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಮಡಿಕೇರಿ ಬೋಧಕ ಆಸ್ಪತ್ರೆಯಲ್ಲಿ ಹೃದ್ರೋಗಕ್ಕೆ ಸಂಬAಧಿಸಿದAತೆ ತುರ್ತು ಮತ್ತು ಉನ್ನತ ಚಿಕಿತ್ಸೆ ಕೊಡಲು ಸೂಕ್ತವಾದ ಆಧುನಿಕ ವ್ಯವಸ್ಥೆಗಳೇ ಇಲ್ಲ. ಹಾಗಾಗಿ ಹೃದಯಾಘಾತದಂಥ ಸಂದರ್ಭದಲ್ಲಿ ಇಲ್ಲಿ ಪ್ರಾಥಮಿಕ ಚಿಕಿತ್ಸೆ ಮಾತ್ರ ಸಿಗುತ್ತದೆ. ಹೆಚ್ಚಿನ ಚಿಕಿತ್ಸೆಗೆ ಬೇರೆ ಕಡೆಗೆ ಕರೆದುಕೊಂಡು ಹೋಗುವಂತೆ ಇಲ್ಲಿಯ ವೈದ್ಯರು ಸಲಹೆ ಕೊಡುವುದು ಸಾಮಾನ್ಯ ಸಂಗತಿಯಾಗಿದೆ. ಹಾಗಾಗಿ ಇಂಥ ಸಂದರ್ಭಗಳಲ್ಲಿ ಬೇರೆ ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಹಲವರು ಪ್ರಾಣ ಕಳೆದುಕೊಂಡ ಉದಾಹರಣೆಗಳೂ ಕೊಡಗಿನಲ್ಲಿ ಸಿಗುತ್ತದೆ.
2011ರ ಜನಗಣತಿ ಪ್ರಕಾರ ಮಲೆನಾಡು ಜಿಲ್ಲೆ ಕೊಡಗಿನ ಜನಸಂಖ್ಯೆ 5.5 ಲP್ಷÀ. ಈ ಪ್ರಮಾಣ ಈಗ ಸುಮಾರು 8-9 ಲP್ಷÀ ತಲುಪಿರಬಹುದು. ಆದರೆ ಎಲ್ಲಾ ಬಗೆಯ ಆರೋಗ್ಯ ತೊಂದರೆಗಳಿಗೆ ತುರ್ತು ಸಂದರ್ಭಗಳಲ್ಲಿ ಸೂಕ್ತ ಚಿಕಿತ್ಸೆ ಕೊಡುವ ಸುಸಜ್ಜಿತ ಆಸ್ಪತ್ರೆ ಜಿಲ್ಲೆಯಲ್ಲಿ ಇಲ್ಲ. ಅದರಲ್ಲೂ ಹೃದಯ ಸಂಬAಧಿ ರೋಗಗಳು ಹೆಚ್ಚುತ್ತಿರುವ ಇಂದಿನ ದಿನಗಳಲ್ಲಿ ಹೃದ್ರೋಗಕ್ಕೆ ಮೀಸಲಾದ ಆಸ್ಪತ್ರೆ ಕೊಡಗಿನವರ ಪಾಲಿಗೆ ಕನಸಾಗಿಯೇ ಉಳಿದಿದೆ. ಮಡಿಕೇರಿಯಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಬೋಧಕ ಆಸ್ಪತ್ರೆ (ಜಿಲ್ಲಾಸ್ಪತ್ರೆ) ಇದ್ದರೂ ತೀವ್ರ ಹÊದಯಾಘಾತದಂಥ ಸಂದರ್ಭಗಳಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ದೂರದ ಮೈಸೂರು, ಬೆಂಗಳೂರು ಅಥವಾ ಮಂಗಳೂರಿಗೆ ತೆರಳಬೇಕಾಗುತ್ತದೆ.
ಹೃದಯ ಸಂಬAಧಿ ರೋಗದಿಂದ ಬಳಲುತ್ತಿರುವವರು ತಪಾಸಣೆ ಮತ್ತು ಚಿಕಿತ್ಸೆಗಾಗಿ ಪರದಾಡಬೇಕಾದ ಸ್ಥಿತಿ ಕೊಡಗಿನಲ್ಲಿ ಇದೆ. ಶ್ರೀಮಂತರೇನೋ ದೂರದ ಊರಿನ ದೊಡ್ಡ ಆಸ್ಪತ್ರೆಗೆ ತೆರಳಬಹುದು.
ಆದರೆ ದೊಡ್ಡ ಸಂಖ್ಯೆಯಲ್ಲಿ ಇರುವ ಬಡವರು ಸರ್ಕಾರಿ ಆಸ್ಪತ್ರೆಯನ್ನೇ ಅವಲಂಭಿಸಿದ್ದಾರೆ. 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹೃದಯಾಘಾತದಿಂದ 27 ಜನರು ಮೃತಪಟ್ಟಿದ್ದಾರೆ. 2024-25ನೇ ಸಾಲಿನಲ್ಲಿ 32 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದರೆ, ಪ್ರಸಕ್ತ ಸಾಲಿನಲ್ಲಿ ಮೂವರು ಮೃತಪಟ್ಟಿರುವುದಾಗಿ ಆರೋಗ್ಯ ಇಲಾಖೆ ಅಂಕಿ-ಅAಶಗಳು ಹೇಳುತ್ತವೆ.
ಹಾಗಾಗಿ ಜಿಲ್ಲೆಯ ಹೃದ್ರೋಗಿಗಳಿಗೆ ಉಪಯೋಗ ಆಗುವ ನಿಟ್ಟಿನಲ್ಲಿ ಸ್ಥಳೀಯವಾಗಿ ಕಾರ್ಡಿಯಾಕ್ ಯೂನಿಟ್ ಬೇಕು ಎನ್ನುವ ಬೇಡಿಕೆ ಬಹಳ ಹಿಂದಿನಿAದಲೂ ಇದೆ. ಈ ಸಂಬAಧ 2024ರ ಬಜೆಟ್‌ನಲ್ಲಿ ಮಡಿಕೇರಿಗೆ ಹೃದ್ರೋಗ ಘಟಕದ ಘೋಷಣೆ ಆಗಿದ್ದರೂ ಅದು ಇನ್ನು ಕೂಡ ಕಾರ್ಯರೂಪಕ್ಕೆ ಬಂದಿಲ್ಲ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಶತಾಯಗತಾಯ ಈ ವರ್ಷದೊಳಗೆ ಮಡಿಕೇರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಆರಂಭಿಸಲೇಬೇಕು ಎನ್ನುವ ಶಪಥ ಮಾಡಿದ್ದಾರೆ.
ಹಾಗಾಗಿ ಸಂಬAಧಿಸಿದ ಇಲಾಖೆ ಸಚಿವರು, ಹಿರಿಯ ಅಧಿಕಾರಿಗಳ ಬೆನ್ನುಬಿದ್ದಿದ್ದು, ಸತತ ಫಾಲೋಅಪ್‌ಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಶಾಸಕರ ಪ್ರಯತ್ನದ ಫಲವಾಗಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬAಧ ನಡೆದಿರುವ ಬೆಳವಣಿಗೆ ಪರಮಾರ್ಶಿಸಲು ಕಳೆದ ತಿಂಗಳು 23ರಂದು ಬೆಂಗಳೂರಿನ ವಿಕಾಸ ಸೌಧದಲ್ಲಿ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಶರಣ ಪ್ರಕಾಶ ಪಾಟೀಲ ಅಧ್ಯಕ್ಷತೆಯಲ್ಲಿ ಪರಿಶೀಲನಾ ಸಭೆ ನಡೆದಿತ್ತು. ಡಾ. ಮಂತರ್ ಗೌಡ ಸಭೆಯಲ್ಲಿ ಖುದ್ದು ಪಾಲ್ಗೊಂಡು ಯೋಜನೆ ಕಾರ್ಯಗತಗೊಳಿಸುವ ಸಂಬAಧ ಸಚಿವರೊಂದಿಗೆ ಚರ್ಚೆ ನಡೆಸಿದರು. ಶೀಘ್ರವಾಗಿ ಸಚಿವ ಸಂಪುಟ ಸಭೆಯಲ್ಲಿ ಯೋಜನೆಯನ್ನು ಮಂಡಿಸಿ ಅನುಮೋದನೆ ಪಡೆಯುವಂತೆ ಮನವಿಯನ್ನೂ ಮಾಡಿದ್ದರು.
ಈ ಸಭೆಯಲ್ಲಿ ಯೋಜನೆ ಪ್ರಗತಿ ವಿವರ ಪರಿಶೀಲಿಸಿದ ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾ. ಶರಣ ಪ್ರಕಾಶ ಪಾಟೀಲ, ಅತ್ಯಾಧುನಿಕ ತಂತ್ರಜ್ಞಾನದ ಕ್ಯಾತ್ ಲ್ಯಾಬ್ ಸ್ಥಾಪಿಸುವ ಸಂಬAಧ ಅಗತ್ಯ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಿ ಟೆಂಡರ್ ಆಹ್ಚಾನಿಸಲು ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದರು. ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂಟಿ ಕಾರ್ಯದರ್ಶಿ ಡಾ. ವೆಂಕಟೇಶ್ ಮೂರ್ತಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ ನಿರ್ದೇಶಕಿ ಡಾ. ಸುಜಾತ ರಾಥೋಡ್, ರಾಜ್ಯ ಪಿಪಿಪಿ ಕೋಶದ ನಿರ್ದೇಶಕ ಪುರುಷೋತ್ತಮ್ ಸಿಂಗ್, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ನಿರ್ದೇಶಕರಾದ ಡಾ.ಎ.ಜೆ. ಲೋಕೇಶ್ ಸೇರಿದಂತೆ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.
ಈ ಎಲ್ಲಾ ಪ್ರಯತ್ನದ ಫಲವಾಗಿ ಪ್ರಗತಿ ಪರಿಶೀಲನಾ ಸಭೆ ನಡೆದು ಒಂದು ತಿಂಗಳು ಪೂರ್ಣಗೊಳ್ಳುವ ಮುನ್ನವೇ ವಿಷಯ ರಾಜ್ಯ ಸಚಿವ ಸಂಪುಟ ಸಭೆಯ ಮುಂದೆ ಬಂದಿದೆ. ಇದಕ್ಕೂ ಮೊದಲು ಸಿಎಂ ಸಿದ್ದರಾಮಯ್ಯ ಅವರನ್ನು ಕೂಡ ಭೇಟಿ ಮಾಡಿದ್ದ ಡಾ. ಮಂತರ್ ಗೌಡ, ಕೊಡಗಿನಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪನೆಯ ತುರ್ತು ಅಗತ್ಯತೆ ಬಗ್ಗೆ ಗಮನ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಹಾಗಾಗಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸಲು ಅಗತ್ಯವಿರುವ ವೈದ್ಯಕೀಯ ಉಪಕರಣಗಳನ್ನು 10.89 ಕೋಟಿ ರೂ. ಮೊತ್ತದಲ್ಲಿ ಖರೀದಿಸಲು ಗುರುವಾರ (ಸೆ.18) ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಹೃದ್ರೋಗಕ್ಕೆ ಸಂಬAಧಿಸಿದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಜನತೆಯ ಬೇಡಿಕೆಗೆ ಸ್ಪಂದಿಸಿದ್ದ ಶಾಸಕ ಡಾ. ಮಂತರ್ ಗೌಡ 2024ರ ಬಜೆಟ್‌ನಲ್ಲಿ ಮಡಿಕೇರಿಗೆ ಹೃದ್ರೋಗ ಘಟಕದ ಘೋಷಣೆ ಆಗುವಂತೆ ನೋಡಿಕೊಂಡಿದ್ದರು. ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಘಟಕ ಕಾರ್ಯಾಚರಣೆ ನಡೆಸಲಿದೆ ಎಂದು ಬಜೆಟ್‌ನಲ್ಲಿ ಹೇಳಲಾಗಿತ್ತು. ಆದರೆ ನಂತರದ ದಿನಗಳಲ್ಲಿ ಈ ವಿಷಯದಲ್ಲಿ ಯಾವುದೇ ಪ್ರಗತಿ ಆಗಿರಲಿಲ್ಲ. ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹೃದಯ ಸಂಬAಧಿ ರೋಗಿಗಳ ಸಂಖ್ಯೆ ಮತ್ತು ಸಾರ್ವಜನಿಕರ ಒತ್ತಾಯದ ಹಿನ್ನೆಲೆಯಲ್ಲಿ ಯೋಜನೆ ಜಾರಿಗಾಗಿ ಮತ್ತೆ ಸರ್ಕಾರಕ್ಕೆ ದುಂಬಾಲು ಬಿದ್ದಿರುವ ಮಂತರ್ ಗೌಡ ತಮ್ಮ ಪ್ರಯತ್ನದಲ್ಲಿ ಈಗ ಬಹುತೇಕ ಯಶಸ್ವಿಯಾಗಿದ್ದು, ಆದಷ್ಟು ಶೀಘ್ರ ಹೃದ್ರೋಗ ಘಟಕ ಕಾರ್ಯಾರಂಭದ ನಿರೀಕ್ಷೆಯಲ್ಲಿ ಸ್ಥಳೀಯರು ಇದ್ದಾರೆ.
ಕೊಡಗಿನಲ್ಲಿ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಡಾ. ಪುನಿತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ ಜಾರಿಯಲ್ಲಿ ಇದೆಯಾದರೂ ಇದು ತತ್‌ಕ್ಷಣದ ಪರಿಹಾರವನ್ನಷ್ಟೇ ಹೃದ್ರೋಗಿಗಳಿಗೆ ಕೊಡುತ್ತದೆ ಎನ್ನುತ್ತಾರೆ ಸಾರ್ವಜನಿಕರು. ತೀವ್ರ ಹೃದಯಾಘಾತದ ಸಂದರ್ಭಗಳಲ್ಲಿ ಈ ಯೋಜನೆ ಅಡಿಯಲ್ಲಿ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡುವುದರ ಮೇಲೆ ಗಮನ ಕೇಂದ್ರೀಕರಿಸುತ್ತದೆ. ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಟೆನೆಕ್ಟ್ ಪ್ಲಸ್ ಇಂಜೆಕ್ಷನ್‌ಗಳನ್ನು ಉಚಿತವಾಗಿ ಒದಗಿಸಲಾಗುತ್ತದೆ, ಇದು ಹೃದಯಾಘಾತದಿಂದಾಗುವ ಪ್ರಾಣಾಪಾಯದಿಂದ ಪಾರಾಗಲು ಸಹಾಯ ಮಾಡುತ್ತದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರು ಜಯದೇವ ಆಸ್ಪತ್ರೆಗೆ ರೋಗಿಗಳನ್ನು ಕಳುಹಿಸಲಾಗುತ್ತದೆ. ಜಯದೇವ ಆಸ್ಪತ್ರೆಯಂಥ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಸೌಲಭ್ಯಗಳು ಸ್ಥಳೀಯವಾಗಿಯೇ ರೋಗಿಗಳಿಗೆ ಸಿಗುವಂತಾದರೆ ಹೃದಯಾಘಾತದಿಂದ ಸಂಭವಿಸಬಹುದಾದ ಸಾಕಷ್ಟು ಸಾವುಗಳನ್ನು ತಪ್ಪಿಸಬಹುದಾಗಿದೆ ಎನ್ನುವುದು ಸ್ಥಳೀಯರ ಅಭಿಪ್ರಾಯ
ಮಡಿಕೇರಿಯಲ್ಲಿ ಇರುವ ಜಿಲ್ಲಾಸ್ಪತ್ರೆಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬAಧ ನಡೆದಿರುವ ಪ್ರಗತಿ ಬಗ್ಗೆ ಕಳೆದ ತಿಂಗಳಷ್ಟೇ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗಿತ್ತು. ಇದೀಗ ಕಾರ್ಡಿಯಾಕ್ ಯೂನಿಟ್ ಸ್ಥಾಪನೆಗೆ ಅಗತ್ಯವಿರುವ ವೈದ್ಯಕೀಯ ಉಪಕರಣಗಳ ಖರೀದಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದಕ್ಕಾಗಿ 10.89 ಕೋಟಿ ರೂ. ವ್ಯಯಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ನಮ್ಮ ಮನವಿಗೆ ಸ್ಪಂದಿಸಿ ಮುಖ್ಯ ಮಂತ್ರಿ.
ಮುಖ್ಯ ಮಂತ್ರಿ ಸಿದ್ದರಾಮಯ್ಯ ಕೊಡಗಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ. ಕಾರ್ಡಿಯಾಕ್ ಯೂನಿಟ್ ಸ್ಥಾಪನೆಗೆ ಉಳಿದ ಕೆಲಸಗಳು ಆದಷ್ಟು ಶೀಘ್ರ‍್ರ ಆರಂಭವಾಗುವ ನಿರೀಕ್ಷೆ ಇದೆ.
ಡಾ. ಮಂತರ್ ಗೌಡ, ಮಡಿಕೇರಿ ಶಾಸಕ