ಪ್ರೌಢ ಶಿಕ್ಷಣದಿಂದಲೇ ವೃತ್ತಿ ಮಾರ್ಗದರ್ಶನ

gan-1
Published on

ಕುಂದಾಪುರ: ಈಗಿನ ಔದ್ಯೋಗಿಕ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಪ್ರೌಢ ಶಿಕ್ಷಣದಿಂದಲೇ ವೃತ್ತಿಯ ಬಗ್ಗೆ ಮಾರ್ಗದರ್ಶನ ಪಡೆದು ನಿಖರ ಗುರಿಯೆಡೆ ತಲುಪುವಲ್ಲಿ ಕಾರ್ಯಕ್ರಮ ಸಹಕಾರಿಯಾಗಲಿದೆ ಎಂದು ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಶೋಭಾ ಎಸ್.ಶೆಟ್ಟಿ ಹೇಳಿದರು.

ಕುಂದಾಪುರದ ಬೋರ್ಡ್ ಹೈಸ್ಕೂಲಿನಲ್ಲಿ ಸೋಮವಾರ ಕರ್ನಾಟಕ ಸರ್ಕಾರ ಕೌಶಲಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲಾಭಿವೃದ್ಧಿ ನಿಗಮ, ಸಮಗ್ರ ಶಿಕ್ಷಣ ಕರ್ನಾಟಕ ಮತ್ತು ಅನಹತ ಯುನೈಟೆಡ್ ಎಫರ್ಟ್ಸ್ ಸಹಯೋಗದಲ್ಲಿ ರಾಜ್ಯದ 150 ಶಾಲೆಗಳಲ್ಲಿ ಅನುಷ್ಠಾನಗೊಂಡ ನನ್ನ ವೃತ್ತಿ ನನ್ನ ಆಯ್ಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ರಾಮಕೃಷ್ಣ ಬಿ.ಜಿ., ಪ್ರಭಾರ ಉಪ ಪ್ರಾಂಶುಪಾಲೆ ವಿನುತಾ ಗಾಂವಕರ್, ಜಿಲ್ಲಾ ನೋಡಲ್ ಪ್ರಸನ್ನ ಕುಮಾರ್, ನನ್ನ ವೃತ್ತಿ ನನ್ನ ಆಯ್ಕೆ ಮಾರ್ಗದರ್ಶಕ ಶಿಕ್ಷಕ ಅರುಣ್ ಶೆಟ್ಟಿ ಉಳ್ತೂರು, ಸ್ಫೂರ್ತಿ ಆಚಾರ್ಯ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net