ಮಕ್ಕಳ ಭವಿಷ್ಯ ರೂಪಿಸುವ ವೃತ್ತಿ ಜೀವನ ಶ್ರೇಷ್ಠ

retired
ಶಿಕ್ಷಕಿ ಸುಜಾತ ಶೆಟ್ಟಿ ಅವರಿಗೆ ಬೀಳ್ಕೊಡುಗೆ ನಡೆಯಿತು
Published on

ಬೆಳ್ವೆ: ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕ ವೃತ್ತಿ ಜೀವನ ಶ್ರೇಷ್ಠ ಎಂದು ನಿವೃತ್ತ ಮುಖ್ಯ ಶಿಕ್ಷಕ ಸುರೇಶ ಶೆಟ್ಟಿ ಬೆಳ್ವೆ ಹೇಳಿದರು.
ಬೆಳ್ವೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 30 ವರ್ಷ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ, ಕಾಸಾಡಿ ಕಿರಿಯ ಪ್ರಾಥಮಿಕ ಶಾಲೆಗೆ ವರ್ಗಾವಣೆಗೊಂಡ ಶಿಕ್ಷಕಿ ಸುಜಾತ ಶೆಟ್ಟಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.

ಬೆಳ್ವೆ ಶ್ರೀ ಶಂಕರನಾರಾಯಣ ದೇವಳ ಮೊಕ್ತೇಸರ ಬಿ.ಶಂಕರ ಶೆಟ್ಟಿ, ವ್ಯವಸಾಯ ಸೇವಾ ಸಹಕಾರಿ ಸಂಘ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ, ಬೆಳ್ವೆ ಗ್ರಾಪಂ ಮಾಜಿ ಅಧ್ಯಕ್ಷ ಬಿ.ಉದಯಕುಮಾರ್ ಪೂಜಾರಿ, ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಎಚ್.ವಸಂತಕುಮಾರ್ ಶೆಟ್ಟಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕ ಸಂಘ ಕುಂದಾಪುರ ವಲಯಾಧ್ಯಕ್ಷ ಗಣೇಶ್‌ಕುಮಾರ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ಅನ್ವರ್ ಹುಸೇನ್ ಅಲ್ಬಾಡಿ, ಗೋಳಿಯಂಗಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ ಗಣೇಶ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಕಿಶನ್‌ರಾಜ್ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಶಿಕ್ಷಕಿ ಜಯಶ್ರೀ ಪ್ರಾಸ್ತಾವಿಕ ಮಾತನಾಡಿದರು. ಆಸ್ಮಾ ಸನ್ಮಾನಪತ್ರ ವಾಚಿಸಿದರು. ಶಾಂತಾ ನಿರೂಪಿಸಿದರು. ಶಿಕ್ಷಕಿ ಸಂಪಾವತಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net