ಹಿರಿಯರ ಮಾರ್ಗದರ್ಶನದಿಂದ ಕಾರ್ಯ ಯಶಸ್ಸು

sanmana
Published on

ಲಕ್ಷ್ಮೇಶ್ವರ: ಸಮಾಜದಲ್ಲಿ ಹಿರಿಯರ ಪಾತ್ರ ಮುಖ್ಯವಾಗಿದ್ದು, ಅವರ ಮಾರ್ಗದರ್ಶನದಲ್ಲಿ ನಡೆದರೆ ಕಾರ್ಯಗಳು ಯಶಸ್ವಿಯಾಗುತ್ತವೆ ಎಂದು ಪುರಸಭೆ ಮುಖ್ಯಾಧಿಕಾರಿ ಮಹೇಶ ಹಡಪದ ಹೇಳಿದರು.

ಸರ್ಕಾರಿ ನಿವೃತ್ತ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪಟ್ಟಣದಲ್ಲಿ ಮಂಗಳವಾರ ಕರೆಯಲಾದ ಮಾಸಿಕ ಸಭೆ ಹಾಗೂ ಶ್ರೀ ಸಿದ್ಧೇಶ್ವರ ಶ್ರೀಗಳ 2ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಘದ ಉಪಾಧ್ಯಕ್ಷ ಪಿ.ಬಿ. ಕರಾಟೆ ಮಾತನಾಡಿ, ಶ್ರೀ ಸಿದ್ಧೇಶ್ವರ ಶ್ರೀಗಳ ವಿಚಾರಧಾರೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಅಲ್ಲದೆ, ಸಂಘದ ಕಾರ್ಯಚಟುವಟಿಕೆಯ ಅನುಕೂಲಕ್ಕಾಗಿ ಪುರಸಭೆಯು ಜಾಗದ ವ್ಯವಸ್ಥೆ ಮಾಡಿಕೊಡಬೇಕು ಎಂದು ಕೋರಿದರು.

ಸಂಘದಿಂದ ಶೈಲಾ ಆದಿ, ನಿವೃತ್ತ ನೌಕರರ ಸಂಘದ ನೂತನ ಸದಸ್ಯರಾದ ಎ.ಬಿ. ತಿಮ್ಮಾಪುರ, ಎ.ವೈ. ನವಲಗುಂದ, ಗುರುಪಾದಪ್ಪ ಗಜೇಂದ್ರಗಡ, ಎಸ್.ಎನ್. ಹೊಸಮನಿ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಬಿ.ಎಸ್. ಈಳಗೇರ, ಗೌರವಾದ್ಯಕ್ಷ ಸಿ.ಜಿ.ಹಿರೇಮಠ, ಆರ್.ಎನ್. ಪಂಚಬಾವಿ, ಪ್ರಧಾನ ಕಾರ್ಯದರ್ಶಿ ಎಸ್.ವಿ. ಅಂಗಡಿ ಇತರರಿದ್ದರು. ಎ.ಎಂ. ಮಠದ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net