

ವಿಜಯವಾಣಿ ಸುದ್ದಿಜಾಲ ಧಾರವಾಡ
ವಿದ್ಯಾರ್ಥಿಗಳು ಸೈಬರ್ ವಂಚನೆಗಳ ಬಗ್ಗೆ ಜಾಗೃತಿ ವಹಿಸಬೇಕು. ಮೊಬೈಲ್ ಹಿತ ಮಿತ ಬಳಕೆ ಮಾಡಬೇಕು. ಕಾನೂನಿನ ಬಗ್ಗೆ ಅರಿವು ಹೊಂದಿರಬೇಕು ಎಂದು ಎಂದು ಎಸಿಪಿ ಪ್ರಶಾಂತ ಸಿದ್ದನಗೌಡರ ಹೇಳಿದರು.
ನಗರದ ಕಿಟೆಲ್ ಕಲಾ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ 2025- 26ನೇ ಸಾಲಿನ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧ್ಯಕ್ಷತೆ ವಹಿಸಿದ್ದ ಸಿಎಸ್‌ಐ, ಕೆಎನ್‌ಡಿ ಮುಖ್ಯ ಆಡಳಿತಾಽಕಾರಿ ವಿಜಯಕುಮಾರ ದಂಡಿನ ಮಾತನಾಡಿ, ವಿದ್ಯಾರ್ಥಿಗಳು ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು ಪರಿಪೂರ್ಣ ವ್ಯಕ್ತಿತ್ವ ಹೊಂದಬೇಕು ಎಂದರು.
ವಿದ್ಯಾರ್ಥಿ ಪ್ರತಿನಿಽ ಪರಿಷತ್ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಲಾಯಿತು. ಪ್ರಾಚಾರ್ಯ ಸಂಜಯ ಗುಡಸಲಮನಿ ಸ್ವಾಗತಿಸಿದರು. ದೈಹಿಕ ಶಿಕ್ಷಣ ನಿರ್ದೇಶಕ ಪ್ರೊ. ಎಸ್.ಜೆ. ದಂಡಿನ ಪ್ರಾರ್ಥಿಸಿದರು. ವಿದ್ಯಾರ್ಥಿ ಪರಿಷತ್ ಸಂಚಾಲಕ ಪ್ರೊ. ಜೆ.ಎಸ್. ಹೂಲಗೇರಿ ವಂದಿಸಿದರು. ಪ್ರೊ. ಎಲ್.ಬಿ. ಮೇಟಿ ನಿರೂಪಿಸಿದರು.