ಮುಂಜಾಗ್ರತೆಯಿಂದ ಕರೊನಾ ನಿಯಂತ್ರಣ

0101
Published on

ಬೆಳಗಾವಿ: ವಿಶ್ವದ ವಿವಿಧ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಕರೊನಾ ವೈರಸ್ ನಿಯಂತ್ರಣದಲ್ಲಿದೆ. ವೈರಸ್ ವಿಷಯದಲ್ಲಿ ಜನರು ಸ್ವಯಂ ಪ್ರೇರಿತರಾಗಿ ದೈಹಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು.

ಬೆಳಗಾವಿಯ ರಾಮತೀರ್ಥ ನಗರದಲ್ಲಿ ಸ್ಥಳೀಯ ನಿವಾಸಿಗಳ ವತಿಯಿಂದ ಭಾನುವಾರ ಆಯೋಜಿಸಿದ್ದ ಕರೊನಾ ಸೇನಾನಿಗಳ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಕಟ್ಟುನಿಟ್ಟಿನ ಕ್ರಮದಿಂದ ದೇಶದಲ್ಲಿ ಕರೊನಾ ಸೋಂಕು ನಿಯಂತ್ರಣಕ್ಕೆ ಬರಲು ಸಾಧ್ಯವಾಗಿದೆ ಎಂದರು.

ಕರೊನಾ ಸೋಂಕು ತಡೆಯಲು ಶ್ರಮಿಸುತ್ತಿರುವ ಪೊಲೀಸ್, ವೈದ್ಯಕೀಯ ಸಿಬ್ಬಂದಿ, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಕರೊನಾ ವಾರಿಯರ್ಸ್ ಎಂದು ಕರೆದಿದ್ದಾರೆ. ಈ ಯೋಧರು ಸಾರ್ವಜನಿಕರ ದೃಷ್ಟಿಯಲ್ಲಿ ದೇವರಾಗಿ ಕಾಣುತ್ತಿದ್ದಾರೆ ಎಂದು ಸಚಿವ ಅಂಗಡಿ ಅಭಿಪ್ರಾಯಪಟ್ಟರು.

ಶಾಸಕ ಅನಿಲ ಬೆನಕೆ, ಬುಡಾ ಅಧ್ಯಕ್ಷ ಗೂಳಪ್ಪ ಹೊಸಮನಿ, ಅಲ್ಪಸಂಖ್ಯಾತರ ನಿಗಮದ ಅಧ್ಯಕ್ಷ ಮುಕ್ತಾರ್ ಪಠಾಣ, ಬಿಜೆಪಿ ಮಹಾನಗರ ಘಟಕದ ಅಧ್ಯಕ್ಷ ಶಶಿ ಪಾಟೀಲ, ಬಿಜೆಪಿ ಬೆಳಗಾವಿ ಉತ್ತರ ಘಟಕದ ಅಧ್ಯಕ್ಷ ಪಾಂಡುರಂಗ ಧಾಮನೇಕರ, ಎಸಿಪಿ ನಾರಾಯಣ ಭರಮನಿ, ಸಿಪಿಐ ಬಿ.ಆರ್. ಗಡ್ಡೇಕರ ಹಾಗೂ ರಾಮತೀರ್ಥ ನಗರದ ನಿವಾಸಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net