ಅದ್ಧೂರಿಯಾಗಿ ಜರುಗಿದ ಕರ್ನಾಟಕ ಸಂಭ್ರಮ ರಥ ಯಾತ್ರೆ

21-12-Shiva-1
ರಾಯಚೂರಿನ ಕೃಷಿ ವಿಜ್ಞಾನ ವಿವಿ ಮುಂಭಾಗದಲ್ಲಿ ಕರ್ನಾಟಕ ಸಂಭ್ರಮ ರಥಯಾತ್ರೆಗೆ ಜಿಲ್ಲಾಕಾರಿ ಚಂದ್ರಶೇಖರ ನಾಯಕ ಗುರುವಾರ ಚಾಲನೆ ನೀಡಿದರು. ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ತಹಸೀಲ್ದಾರ್ ಸುರೇಶ ವರ್ಮಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಾಹಿತಿ ವೀರಹನುಮಾನ ಇದ್ದರು.
Published on

ರಾಯಚೂರು: ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಂಡು 50 ವರ್ಷ ತುಂಬಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ಕರ್ನಾಟಕ ಸಂಭ್ರಮ-50 ರಥ ಯಾತ್ರೆ ಗುರುವಾರ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಜಿಲ್ಲಾಡಳಿತದಿಂದ ಅದ್ಧೂರಿಯಾಗಿ ಸ್ವಾಗತಿಸಿದರು.
ನಗರದ ಕೃಷಿ ವಿಜ್ಞಾನಗಳ ವಿವಿಯಲ್ಲಿ ಭುವನೇಶ್ವರಿ ದೇವಿ ಹಾಗೂ ರಥಕ್ಕೆ ವಿಶೇಷ ಪೂಜೆ ಸಲ್ಲಿಸಿದ ನಂತರ ನಗರದ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ನಗರಸಭೆ, ತೀನ್‌ಕಂದೀಲ್, ಚಂದ್ರವೌಳೇಶ್ವರ ವೃತ್ತ, ಗಂಜ್ ವೃತ್ತದವರೆಗೆ ಮೆರವಣಿಗೆ ನಡೆಸಲಾಯಿತು. ನಂತರ ಶಕ್ತಿನಗರ ಮೂಲಕ ರಥ ಯಾತ್ರೆ ಯಾದಗಿರಿ ಜಿಲ್ಲೆಗೆ ಪ್ರವೇಶ ಪಡೆಯಿತು.
ಯಾತ್ರೆಯಲ್ಲಿ ಡೊಳ್ಳು ಕುಣಿತ, ಹಲಗೆ ಮೇಳ ಸೇರಿದಂತೆ ವಿವಿಧ ಕಲಾ ತಂಡಗಳು ಪಾಲ್ಗೊಂಡಿದ್ದವು. ಶಾಲಾ ಮಕ್ಕಳು ವಿಶೇಷ ನೃತ್ಯದ ಮೂಲಕ ಮೆರವಣಿಗೆಗೆ ಮೆರಗು ತಂದಿದ್ದರು. ಕನ್ನಡ ಪರ ಘೋಷಣೆಗಳನ್ನು ಕೂಗುವ ಮೂಲಕ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಕಾರಿ ಚಂದ್ರಶೇಖರ ನಾಯಕ, ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ, ಎಸ್ಪಿ ಬಿ.ನಿಖಿಲ್, ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ತಹಸೀಲ್ದಾರ್ ಸುರೇಶ ವರ್ಮಾ, ಪೌರಾಯುಕ್ತ ಗುರುಸಿದ್ದಯ್ಯ ಹಿರೇಮಠ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಮಂಗಳಾ ನಾಯಕ, ಸಾಹಿತಿಗಳಾದ ವೀರಹನುಮಾನ, ಈರಣ್ಣ ಬೆಂಗಾಲಿ, ಕಸಾಪ ತಾಲೂಕು ಅಧ್ಯಕ್ಷ ವೆಂಕಟೇಶ ಬೇವಿನಬೆಂಚಿ ಹಾಗೂ ಕನ್ನಡ ಪರ ಸಂಘಟನೆಗಳ ಪದಾಕಾರಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net