

ಶಿವಮೊಗ್ಗ: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಂಪು ಗುಂಪಾಗಿ ಕರೊನಾ ಪ್ರಕರಣ ವರದಿಯಾಗುತ್ತಿದ್ದು, 2ನೇ ಅಲೆಯ ಅಪಾಯವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯ ಮುಂಬರುವ ಯುಗಾದಿ, ಹೋಳಿ, ಷಬ್-ಎ-ಬರಾತ್, ಗುಡ್ ಫ್ರೈಡೇ ಹಬ್ಬಗಳಲ್ಲಿ ಸಾರ್ವಜನಿಕರು ಗುಂಪು ಸೇರುವುದನ್ನು ನಿರ್ಬಂಧಿಸಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಆದೇಶಿಸಿದ್ದಾರೆ.
ಸಭೆ-ಸಮಾರಂಭಗಳ ಆಚರಣೆ ಸಂದರ್ಭದಲ್ಲಿ ಜನರು ಗುಂಪು ಸೇರಿದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಕಾಯ್ದೆ-2005 ಅಡಿಯಲ್ಲಿ ಅಧಿಕಾರ ಚಲಾಯಿಸಿ ನಿಬರ್ಂಧಿಸಿದ್ದಾರೆ. ನಿಯಮಗಳನ್ನು ಉಲ್ಲಂಘಿಸಿದ ವ್ಯಕ್ತಿ, ಸಂಘ-ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗಾಗಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಕರೊನಾ ನಿಯಂತ್ರಿಸಲು ಜಿಲ್ಲಾಡಳಿತ ಹಾಗೂ ಮಹಾನಗರ ಪಾಲಿಕೆಯೊಂದಿಗೆ ಸಹಕರಿಸುವಂತೆ ಮನವಿ ಮಾಡಿದ್ದಾರೆ.