ಕರೊನಾ ಶಂಕೆ ಮಣಿಪಾಲ ಕೆಎಂಸಿಗೆ ಮಹಿಳೆ ದಾಖಲು

carona jan 30 2020
Published on

ಉಡುಪಿ: ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೊನಾ ಶಂಕಿತ ಮಹಿಳೆ ದಾಖಲಾಗಿದ್ದಾರೆ.

ಈಚೆಗೆ ಮೆಕ್ಕಾ ಯಾತ್ರೆಯಿಂದ ಬಂದಿರುವ ಸಾಗರ ಮೂಲದ ಮಹಿಳೆಯೊಬ್ಬರಲ್ಲಿ ಶೀತ, ಕೆಮ್ಮು, ಗಂಟಲು ನೋವು ಹಾಗೂ ಜ್ವರದ ಲಕ್ಷಣ ಕಾಣಿಸಿಕೊಂಡಿದ್ದು, ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಸ್ವಲ್ಪ ಗುಣಮುಖರಾದ ಮೇಲೆ ಭಾರತಕ್ಕೆ ಬಂದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಗಂಟಲಿನ ಸ್ರಾವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಇನ್ನಷ್ಟೇ ವರದಿ ಲಭಿಸಬೇಕಿದೆ.

ಜಿಲ್ಲಾ ಆರೋಗ್ಯ ಇಲಾಖೆಯ ಆದೇಶದಂತೆ ಕೆಎಂಸಿ ಆಸ್ಪತ್ರೆಯಲ್ಲಿ ಕರೊನಾ ಶಂಕಿತರ ಚಿಕಿತ್ಸೆಗಾಗಿ 20 ವಿಶೇಷ ಕೊಠಡಿಗಳನ್ನು ಸಿದ್ಧಪಡಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲೂ ಪ್ರತ್ಯೇಕ ವಾರ್ಡ್ ತೆರೆಯಲಾಗಿದ್ದು, ಇತ್ತೀಚೆಗೆ ರೋಗ ಲಕ್ಷಣ ಹೊಂದಿರುವವರಿಗೆ ಇಲ್ಲಿ ಚಿಕಿತ್ಸೆ ನೀಡಲಾಗಿತ್ತು. ಇದುವರೆಗೆ ಜಿಲ್ಲೆಯ ಯಾರೊಬ್ಬರಲ್ಲೂ ಕರೊನಾ ಖಚಿತಗೊಂಡಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net