ನೀರು ಸಂರಕ್ಷಣೆಗೆ ಪೂರಕ ಕಾಮಗಾರಿ ಕೈಗೊಳ್ಳಿ - ರಾಹುಲ್ ಶಿಂಧೆ

Rahula Sinde CEO
ವಿಜಯಪುರ ಜಿಪಂ ಸಭಾಂಗಣದಲ್ಲಿ ಸಿಇಒ ರಾಹುಲ್ ಶಿಂಧೆ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ವಿವಿಧ ಇಲಾಖೆ ಅಧಿಕಾರಿಗಳಿದ್
Published on

ವಿಜಯಪುರ: ಜಲ ಶಕ್ತಿ ಅಭಿಯಾನದಡಿ ನೀರಿನ ಸಂರಕ್ಷಣೆಗೆ ಮತ್ತು ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು ಇತರೆ ಜಲಮೂಲಗಳ ಪುನಃಶ್ಚೇತನ, ನೀರಿನ ಮರುಬಳಕೆ ಮತ್ತು ಮರುಪೂರಣ, ಜಲಾನಯನ ಪ್ರದೇಶ ಅಭಿವೃದ್ಧಿ, ಅರಣ್ಯೀಕರಣ ಕಾಮಗಾರಿಗಳಿಗೆ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಪಂ ಸಿಇಒ ರಾಹುಲ್ ಶಿಂಧೆ ಸೂಚಿಸಿದರು.

ನಗರದ ಜಿ.ಪಂ. ಸಭಾಂಗಣದಲ್ಲಿ ಮಂಗಳವಾರ ನಡೆದ ಜಲ ಶಕ್ತಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆ ನೀರು ಸಂರಕ್ಷಣೆಗಾಗಿ ಬೋರವೆಲ್, ಇಂಗುಗುಂಡಿ, ಚೆಕ್ ಡ್ಯಾಂ ನಿರ್ಮಾಣ, ಸಮಗ್ರ ಕೆರೆ ಅಭಿವೃದ್ಧಿ, ಗೋಕಟ್ಟೆ, ಕಲ್ಯಾಣಿ ಪುನಃಶ್ಚೇತನ, ಬದು ಮತ್ತು ಕೃಷಿ ಹೊಂಡ ನಿರ್ಮಾಣ ಕಾಮಗಾರಿಗಳನ್ನು ಅನುಷ್ಟಾನಗೊಳಿಸುವುದು. ಸ್ಥಳಾವಕಾಶವಿರುವ ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸಸಿಗಳನ್ನು ನೆಡುವುದು, ಅಮೃತ ಸರೋವರದ ಆವರಣದಲ್ಲಿ ಮತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಲಭ್ಯವಿರುವ ಸರ್ಕಾರಿ ಸ್ಥಳಗಳಲ್ಲಿ ಸಸಿಗಳನ್ನು ನೆಡಲು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ಕಲ್ಯಾಣಿ, ಕೆರೆ-ಕಟ್ಟೆಯಂತಹ ವಿವಿಧ ಜಲ ಮೂಲಗಳನ್ನು ಸ್ವಚ್ಛವಾಗಿಡಬೇಕು ಎಂದರು.

ಕುಡಿಯಲು ಬಳಸುವ ಜಲ ಮೂಲಗಳನ್ನು ಮೇಲಿಂದ ಮೇಲೆ ನೀರಿನ ಗುಣಮಟ್ಟವನ್ನು ಪರೀಕ್ಷೆ ಮಾಡಬೇಕು. ಈಗಾಗಲೇ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವ-ಸಹಾಯ ಸಂಘದ ಮೂಲಕ ಅಮೃತ ನರ್ಸರಿಗಳನ್ನು ಪ್ರಾರಂಭ ಮಾಡಲಾಗಿದ್ದು, ಸದರಿ ನರ್ಸರಿಗಳಲ್ಲಿ ಬೆಳೆದ ಸಸಿಗಳನ್ನು ಎಲ್ಲಾ ಗ್ರಾಮ ಪಂಚಾಯಿತಿಯವರು ನಿಯಮಾನುಸಾರ ಖರೀದಿಸಿ, ಸರ್ಕಾರಿ ಶಾಲೆಗಳಲ್ಲಿ ಪೌಷ್ಟಿಕ ತೋಟ ನಿರ್ಮಾಣದಂತಹ ಕಾಮಗಾರಿಗಳಿಗೆ ಕಡ್ಡಾಯವಾಗಿ ಬಳಸುವಂತೆ ಅವರು ಸೂಚಿಸಿದರು.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯತಿ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net