

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ಸಮೀಪ ಮುಖ್ಯರಸ್ತೆಯಲ್ಲಿ ಭಾನುವಾರ ಕಾರುಗಳು ಡಿಕ್ಕಿಯಾಗಿ ಎರಡೂ ಕಾರಿನಲ್ಲಿದ್ದ ಸವಾರರಿಗೆ ಸಣ್ಣಪುಟ್ಟ ಗಾಯಗೊಂಡು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬದಿಯಡ್ಕ ಕಡೆಯಿಂದ ಸಕಲೇಶಪುರಕ್ಕೆ ಹೋಗುತ್ತಿದ್ದ ವ್ಯಾಗನರ್ ಕಾರು ಮತ್ತು ಸುಬ್ರಹ್ಮಣ್ಯದಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಚಿತ್ರದುರ್ಗ ಮೂಲದ ಕಾರಿನ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಿಂದ ಬದಿಯಡ್ಕ ಮೂಲದ ಕಾರಿನಲ್ಲಿದ್ದ ಮಗು ಹಾಗೂ ಮಹಿಳೆ ಸೇರಿ ನಾಲ್ಕು ಮಂದಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಚಿತ್ರದುರ್ಗ ಮೂಲದ ಕಾರಿನ ಓರ್ವ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.