

ಪಡುಬಿದ್ರಿ: ಪ್ರಾಚೀನ ಕಾಲದ ಶಿಲ್ಪಕಲೆಗಳನ್ನು ಮೀರಿಸುವ ಮರದ ಮತ್ತು ಕಲ್ಲಿನ ಕೆತ್ತನೆಗಳು ಅತ್ಯದ್ಭುತವಾಗಿ ಮೂಡಿಬಂದಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಎಲ್ಲರೂ ಭೇಟಿ ನೀಡಿ ಕಣ್ತುಂಬಿಕೊಳ್ಳಬೇಕು ಎಂದು ವಿಧಾನಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹೇಳಿದರು.
ಪತ್ನಿ ತರ್ಪಣ ಜತೆ ಸೋಮವಾರ ಕಾಪು ಮಾರಿಗುಡಿ ದೇವಸ್ಥಾನಕ್ಕೆ ಭೇಟಿ ನೀಡಿ ಮಾರಿಯಮ್ಮನ ದರ್ಶನ ಪಡೆದರು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.ವಾಸುದೇವ ಶೆಟ್ಟಿ ಉಪಸ್ಥಿತಿಯಲ್ಲಿ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅಮ್ಮನ ಅನುಗ್ರಹ ಪ್ರಸಾದ ನೀಡಿ ಅವರನ್ನು ಗೌರವಿಸಿದರು.
ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ಕಾಪು ಪುರಸಭಾ ವ್ಯಾಪ್ತಿ ವಾರ್ಡ್ ಸಮಿತಿ ಪ್ರಧಾನ ಸಂಚಾಲಕ ಶ್ರೀಕರ ಶೆಟ್ಟಿ ಕಲ್ಯಾ, ಪ್ರಚಾರ ಸಮಿತಿ ಸಂಚಾಲಕ ಜಯರಾಮ ಆಚಾರ್ಯ, ಅಭಿವೃದ್ಧಿ ಸಮಿತಿ ಕಚೇರಿ ನಿರ್ವಹಣಾ ಸಮಿತಿ ಪ್ರಧಾನ ಸಂಚಾಲಕ ಮಧುಕರ್ ಎಸ್., ಕಾಪು ಪುರಸಭಾ ಸದಸ್ಯ ಅನಿಲ್ ಕುಮಾರ್ ಕಾಪು, ಪ್ರಚಾರ ಸಮಿತಿ ಸಂಚಾಲಕ ರಘುರಾಮ್ ಶೆಟ್ಟಿ ಕೊಪ್ಪಲಂಗಡಿ, ಪ್ರಬಂಧಕ ಗೋವರ್ಧನ್ ಸೇರಿಗಾರ್, ಸಿಬ್ಬಂದಿ ಲಕ್ಷ್ಮಣ್ ಶೆಟ್ಟಿ ಮಂಡೇಡಿ ಉಪಸ್ಥಿತರಿದ್ದರು.