ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದಕ್ಕೆ ದಕ್ಕೆಯಾಗುವಂತಹ ಸಂದೇಶವನ್ನು ಪ್ರಸಾರ ಮಾಡಿದಾತನ ವಿರುದ್ಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೇಸ್‌ಬುಕ್‌ನಲ್ಲಿ ಅಬ್ದುಲ್ ಕೆ. ಎಂಬ ಹೆಸರಿನ ಖಾತೆಯನ್ನು ಹೊಂದಿರುವ ವ್ಯಕ್ತಿ ಕೋಮು ಸೌಹಾರ್ದಕ್ಕೆ ಧಕ್ಕೆಯಾಗುವಂತಹ ಹಾಗೂ ಅನ್ಯಸಮುದಾಯದ ವಿರುದ್ಧ ಅವಹೇಳನಕಾರಿ ಸಂದೇಶವನ್ನು ಪ್ರಸಾರ ಮಾಡಿರುವುದು ಸೋಮವಾರ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ವಿಭಿನ್ನ ಕೋಮುಗಳ ನಡುವೆ ದ್ವೇಷ ಮೂಡಿ ಸಾರ್ವಜನಿಕ ಶಾಂತಿ ನೆಮ್ಮದಿಗೆ ದಕ್ಕೆಯಾಗುವ ಸಾಧ್ಯತೆ ಬಗ್ಗೆ ಪ್ರಕರಣ ದಾಖಲಾಗಿದೆ.