ಬಿಜೆಪಿ ಮುಖಂಡ ಮಣಿಕಂಠ ವಿರುದ್ಧ ಕೇಸ್​

manikanta rathod
Published on

ಚಿತ್ತಾಪುರ (ಕಲಬುರಗಿ): ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್​ ರ್ಖಗೆ ವಿರುದ್ಧ ಬಿಜೆಪಿ ಮುಖಂಡ ಮಣಿಕಂಠ ರಾಠೋಡ ಅವಹೇಳನಕಾರಿ ಮಾತನಾಡಿದ್ದಾರೆ ಎಂದು ಕಾಂಗ್ರೆಸ್​ ಕಾರ್ಯಕರ್ತ ಹಣಮಂತ ಸೋಮನ್​ ನೀಡಿದ ದೂರಿನಂತೆ ಚಿತ್ತಾಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ತಮ್ಮ ೇಸ್​ಬುಕ್​ ಖಾತೆಯಲ್ಲಿ ವಿಡಿಯೋ ಹರಿಬಿಟ್ಟಿದ್ದು, ವಿಡಿಯೋದಲ್ಲಿ ಸಚಿವ ಪ್ರಿಯಾಂಕ್​ ರ್ಖಗೆ ಅವರನ್ನು ಏಕವಚನದಲ್ಲಿ ಸಂಬೋಧಿಸಿ, ಅಕ್ಕಿ ಕಳ್ಳ ಅವಹೇಳನಕಾರಿ ಮಾತಾಡಿದ್ದಾರೆ. ಪೊಲೀಸ್​ ಅಧಿಕಾರಿಗಳನ್ನು ನಿಂದಿಸಿ ಇಲಾಖೆ ಗೌರವ, ನತೆಗೆ ಧಕ್ಕೆ ಮಾಡಿದ್ದಾರೆ. ಕೋಲಿ ಕಬ್ಬಲಿಗ ಎಸ್​ಟಿ ಹೋರಾಟ ಸಮಿತಿ ಅಧ್ಯಕ್ಷ ಲಚ್ಚಪ್ಪ ಜಮಾದಾರ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ. ನ್ಯಾಯಾಧೀಶರು ನೀಡಿದ ತೀರ್ಪಿನ ವಿರುದ್ಧ ಮಾತಾಡಿ, ನ್ಯಾಯಾಂಗ ನಿಂದನೆ ಮಾಡಿದ್ದಾರೆ.

ಸಮಾಜದಲ್ಲಿ ವ್ಯಕ್ತಿತ್ವ, ನತೆ ಹೊಂದಿದವರ ಅವಹೇಳನ ಮಾಡಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ, ದ್ವೇಷ, ಕಲಹ ಉಂಟು ಮಾಡುವ ಹುನ್ನಾರ ನಡೆಸಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ನೀಡಿದ ದೂರಿನಂತೆ ಚಿತ್ತಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net