

ಉಡುಪಿ: ಬಡ ಕುಟುಂಬದ ಪರನಿಂತ ಬೆಳ್ತಂಗಡಿ ಶಾಸಕ ಹರೀಶ್ ಪೂಜಾ ವಿರುದ್ಧ ಅರಣ್ಯ ಇಲಾಖೆ ಅಧಿಕಾರಿಗಳು ಕೇಸ್ ದಾಖಲೆ ಮಾಡಿರುವುದು ಖಂಡನಾರ್ಹ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಅರಣ್ಯ ಇಲಾಖೆಯ ಅಧಿಕಾರಿಗಳ ದೌರ್ಜನ್ಯಕ್ಕೆ ಒಳಗಾದ ಬಡ ಕುಟುಂಬದ ಪರನಿಂತ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಅಧಿಕಾರಿಗಳ ಮೂಲಕ ಕಾಂಗ್ರೆಸ್ ಸರ್ಕಾರ ಕೇಸ್ ದಾಖಲಿಸಿದೆ. ಓರ್ವ ಜವಾಬ್ದಾರಿಯುತ ಶಾಸಕನಾಗಿ ತನ್ನ ಕ್ಷೇತ್ರದ ಬಡ ಕುಟುಂಬದ ಪರ ನಿಂತು ದೌರ್ಜನ್ಯವನ್ನು ಖಂಡಿಸುವುದು ತಪ್ಪಾಗಿದೆ. ಕರಾವಳಿಯ ಬಿಜೆಪಿ ಶಾಸಕರನ್ನು ಶತಾಯ ಗತಾಯ ಕಟ್ಟಿಹಾಕುವ ಪ್ರಯತ್ನಕ್ಕೆ ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ. ಇಂತಹ ನೂರು ಕೇಸ್ ಗಳನ್ನು ಬಿಜೆಪಿ ಶಾಸಕರ ವಿರುದ್ಧ ದಾಖಲಿಸಿದರೂ ಬಡ ಜನರ ಹಿತಕಾಯುವ ವಿಚಾರದಲ್ಲಿ ಎಂದಿಗೂ ರಾಜೀಯಾಗುವ ಪ್ರಶ್ನೆಯೇ ಇಲ್ಲ. ಸಂಘಟನೆಯ ಹಿನ್ನೆಲೆಯಲ್ಲಿ ಬೆಳೆದು ಬಂದ ಬಿಜೆಪಿ ಶಾಸಕರು ಕಾಂಗ್ರೆಸ್ ಸರ್ಕಾರದ ಬೆದರಿಕೆ ತಂತ್ರಗಳಿಗೆ ಮಣಿಯುವುದಿಲ್ಲ ಎಂದು ತಿಳಿಸಿದ್ದಾರೆ.