ಮಹಿಳೆಗೆ ಅಶ್ಲೀಲ ಸಂದೇಶ: ಪಪಂ ಸದಸ್ಯನ ವಿರುದ್ಧ ಪ್ರಕರಣ ದಾಖಲು

Someshwar Naik
Published on
ಯಲ್ಲಾಪುರ:  ಮಹಿಳೆಯೊಬ್ಬರಿಗೆ ವಾಟ್ಸಪ್ ನಲ್ಲಿ ಅಶ್ಲೀಲ‌ ಮೆಸೆಜ್ ಕಳುಹಿಸಿದ ಬಗ್ಗೆ ಯಲ್ಲಾಪುರ ಪಟ್ಟಣ ಪಂಚಾಯಿತಿ ಸದಸ್ಯ ಸೋಮೇಶ್ವರ ನಾಯ್ಕ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
    ಯಲ್ಲಾಪುರದ ರವೀಂದ್ರನಗರದ ಪಟ್ಟಣ ಪಂಚಾಯಿತಿ ಸದಸ್ಯ ಸೋಮೇಶ್ವರ ನಾಯ್ಕ (ಸೋಮು ನಾಯ್ಕ), ತನಗೆ ವಾಟ್ಸಪ್ ನಲ್ಲಿ ಅಶ್ಲೀಲ ಮೆಸೆಜ್ ಕಳುಹಿಸಿದ್ದಾರೆ. ಆ ಮೂಲಕ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ನೊಂದ ಮಹಿಳೆ ದೂರು ನೀಡಿದ್ದಾರೆ.ಸೋಮೇಶ್ವರ ವಿರುದ್ಧ 75 ಬಿ.ಎನ್.ಎಸ್ ಹಾಗೂ 67 ಐಟಿ ಆ್ಯಕ್ಟ್ ಅಡಿಯಲ್ಲಿ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net