

ಹುಬ್ಬಳ್ಳಿ: ಮಹಿಳೆಯೊಬ್ಬರನ್ನು ಹಿಂಬಾಲಿಸುವುದಲ್ಲದೆ, ಅಶ್ಲೀಲ ಸನ್ನೆ ಮಾಡಿ, ಖಾಸಗಿ ಅಂಗ ಪ್ರದರ್ಶನ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಇಲ್ಲಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಧಾಕರ್ ಟಿ. ವಿರುದ್ಧ ಪ್ರಕರಣ ದಾಖಲಾಗಿದೆ. ಕಾಸ್ಮೆಟಿಕ್ ವ್ಯವಹಾರ ಮಾಡಿಕೊಂಡಿರುವ ಮಹಿಳೆಗೆ ರಸ್ತೆಯಲ್ಲಿ ಹೋಗುವಾಗ ಹಿಂಬಾಲಿಸಿ ಅಶ್ಲೀಲ ಸನ್ನೆ ಮಾಡಿದ್ದಾನೆ ಎನ್ನಲಾಗಿದೆ. ಅಲ್ಲದೆ, ಇತ್ತೀಚೆಗೆ ಅಸಹ್ಯವಾಗಿ ಮಾತನಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾಳೆ.