ಆಟೋ ವ್ಹೀಲಿಂಗ್ ಮಾಡಿದ್ದ ಮೂವರ ವಿರುದ್ಧ ಕೇಸ್

25 HANUR 4
Published on

 ಹನೂರು: ಮಲೆಮಹದೇಶ್ವರ ಬೆಟ್ಟ ತಾಳುಬೆಟ್ಟ ಮಾರ್ಗದಲ್ಲಿ ಆಟೋ ವ್ಹೀಲಿಂಗ್ ಮಾಡಿದ್ದ ಮೂವರ ವಿರುದ್ಧ ಮ.ಬೆಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮ.ಬೆಟ್ಟ ತಾಳುಬೆಟ್ಟ ಮಾರ್ಗ ಅರಣ್ಯ ಪ್ರದೇಶದಿಂದ ಹಾದು ಹೋಗಿದ್ದು, ರಸ್ತೆ ಕಿರಿದಾಗಿದೆ. ವಾಹನಗಳ ಸಂಖ್ಯೆ ಹೆಚ್ಚಿರುವುದರಿಂದ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಲೇ ಇವೆ. ಹಾಗಾಗಿ ಈ ಮಾರ್ಗದಲ್ಲಿ ಚಾಲಕರು ಜಾಗರೂಕತೆಯಿಂದ ಚಾಲನೆ ಮಾಡಬೇಕಿದೆ. ಈ ಮಧ್ಯೆ ಕಳೆದ 3 ದಿನದ ಹಿಂದೆ ಮೂವರು ಚಾಲಕರು ಆಟೋ ವ್ಹೀಲಿಂಗ್ ಮಾಡಿ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದರು. ಈ ದೃಶ್ಯ ವೈರಲ್ ಆಗಿದ್ದು, ಸಾರ್ವಜನಿಕರು ಸಂಬಂಧಪಟ್ಟವರ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಒತ್ತಾಯಿಸಿದ್ದರು. ಈ ಬಗ್ಗೆ ಅಗತ್ಯ ಕ್ರಮವಹಿಸಿದ ಇನ್ಸ್‌ಪೆಕ್ಟರ್ ಜಗದೀಶ್ ಅವರು ವಿಳಾಸ ಪತ್ತೆಹೆಚ್ಚಿ ಆಟೋವನ್ನು ವಶಪಡಿಸಿಕೊಂಡು ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net