ಇಟ್ಟಿಗೆ ಬಟ್ಟಿಯಲ್ಲಿ ಕಾರ್ಮಿಕರ ಮೇಲಿನ ಹಲ್ಲೆ ಪ್ರಕರಣ, ಜಿಲ್ಲಾಸ್ಪತ್ರೆಗೆ ಸಚಿವ ಎಂ.ಬಿ. ಪಾಟೀಲ ಭೇಟಿ, ನೊಂದ ಜೀವಗಳಿಗೆ ಆರ್ಥಿಕ ನೆರವು

M B PATIL VISIT HOSPITAL
ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಕಾರ್ಮಿಕರ ಕುಟುಂಬಸ್ಥರಿದ್ದಾರೆ.
Published on

ವಿಜಯಪುರ: ಇಟ್ಟಿಗೆ ಬಟ್ಟಿಯಲ್ಲಿ ಹಲ್ಲೆಗೊಳಗಾಗಿರುವ ಕಾರ್ಮಿಕರಿಗೆ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರಿಗೆ ತಲಾ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವುದರ ಜೊತೆಗೆ ಉದ್ಯೋಗ ಒದಗಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಭರವಸೆ ನೀಡಿದರು.

ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕಾರ್ಮಿಕರನ್ನು ಭೇಟಿ ಮಾಡಿದ ಸಚಿವ ಎಂ.ಬಿ. ಪಾಟೀಲ, ಕಾರ್ಮಿಕರು ಇನ್ಮುಂದೆ ಇಟ್ಟಿಗೆ ಬಟ್ಟಿ ಕೆಲಸಕ್ಕೆ ಹೋಗುವುದು ಬೇಕಿಲ್ಲ. ಅವರಿಗೆ ಜಮಖಂಡಿ ಶುಗರ್ಸ್, ಪ್ರಭುಲಿಂಗೇಶ್ವರ ಶುಗರ್ಸ್ ಅಥವಾ ಬಿಎಲ್‌ಡಿಇ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ತಿಳಿಸಿದರು.

ಕಾರ್ಮಿಕರ ಆರೋಗ್ಯ ವಿಚಾರಿಸಿದ ಸಚಿವರು, ಸರ್ಕಾರ ನಿಮ್ಮೊಂದಿಗಿದೆ. ಸರ್ಕಾರದಿಂದ ಸೈಕಲ್ ಒದಗಿಸಲು ಕ್ರಮ ಕೈಗೊಳ್ಳುವೆ. ತಪ್ಪಿತಸ್ಥರಿಗೆ ಬುದ್ದಿ ಕಲಿಸಲು ಕಾನೂನಿನ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಯಾವುದಕ್ಕೂ ಆತಂಕ ಪಡಬೇಡಿ ಎಂದರು.

ನಾಗಠಾಣ ಶಾಸಕ ವಿಠಲ ಕಟಕದೊಂಡ, ಜಿಪಂ ಸಿಇಒ ರಿಷಿ ಆನಂದ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಡಾ. ಮಹಾಂತೇಶ ಬಿರಾದಾರ, ವಿಜಯಪುರ ಗ್ರಾಮೀಣ ಸಿಪಿಐ ರಾಯಗೊಂಡ ಜಾನರ, ಮುಖಂಡರಾದ ಅಡಿವೆಪ್ಪ ಸಾಲಗಲ್ಲ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net