ಶಾಲಾ ಮಕ್ಕಳಿಂದ ಶೌಚಗೃಹ ಶುಚಿಗೊಳಿಸಿದ ಪ್ರಕರಣ: ವಿಚಕ್ಷಣ ದಳ ರಚಿಸಲು ಸಚಿವ ಮಹದೇವಪ್ಪ ಸೂಚನೆ

Mahadevappa
Published on

ಮೈಸೂರು: ಯಶವಂತಪುರ ಆಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಂದ ಶೌಚಗೃಹ ಶುಚಿಗೊಳಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಚಕ್ಷಣ ದಳ ರಚಿಸಲು ಸೂಚಿಸಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.

ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಾಲೆಯ ಹಂತದಲ್ಲಿ ಏನಾಗಿದೆ ಅಂತ ಮಾಹಿತಿ ಇಲ್ಲ. ಈ ಕುರಿತು ಮಾಹಿತಿ ಸಂಗ್ರಹಿಸಲು ಸೂಚನೆ ನೀಡಲಾಗಿದೆ. ಅಲ್ಲೊಂದು, ಇಲ್ಲೊಂದು ಘಟನೆಗಳು ನಡೆಯುತ್ತವೆ. ಅದನ್ನು ಜನರಲೈಸ್ ಮಾಡೋದು ಬೇಡ. ನಾವು ಯಾರನ್ನೂ ರಕ್ಷಣೆ ಮಾಡುವುದಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ನೀಡುವುದು ನಿಶ್ಚಿತ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net