ಮೈಸೂರು: ಗನ್ ಹಿಡಿದು ಫೋಜ್ ನೀಡಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದ ಯುವಕನ ವಿರುದ್ಧ ನಗರದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಿ.ಕೆ.ಲೇಔಟ್‌ನ ಚಿನ್ನಾಭರಣ ಅಂಗಡಿಯ ವ್ಯಾಪಾರಿ ವಿನೋದ್ ವಿರುದ್ಧ ಪ್ರಕರಣ ದಾಖಲಾಗಿದೆ. ಸಿನಿಮಿಯಾ ರೀತಿಯಲ್ಲಿ ಗನ್ ಹಿಡಿದು ಕಾರಿನಲ್ಲಿ ತೆರಳುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇದರ ವಿರುದ್ಧ ಪ್ರಕರಣ ದಾಖಲಾಗುತ್ತಿದ್ದಂತೆಯೇ ವಿನೋದ್‌ನನ್ನು ವಿಚಾರಣೆಗೆ ಒಳಪಡಿಸಿದಾಗ ಆದು ದೀಪಾವಳಿಯಲ್ಲಿ ಪಟಾಕಿ ಸಿಡಿಸುವ ನಕಲಿ ಗನ್. ಅಲ್ಲದೇ ಅದನ್ನು ಮೂರು ವರ್ಷದ ಹಿಂದೆ ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾಗಿ ಆತ ತಿಳಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.