

ಮಂಗಳೂರು : ಫೇಸ್‌ಬುಕ್‌ನಲ್ಲಿ ಕೋಮು ಪ್ರಚೋದನೆ ಮಾಡುವಂತಹ ರೀಲ್ಸ್ ಅಪ್‌ಲೋಡ್ ಮಾಡಿದ ಹಿನ್ನೆಲೆಯಲ್ಲಿ ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉರ್ವ ಪೊಲೀಸರು ಜೂ.3ರಂದು ರಾತ್ರಿ ಫೇಸ್‌ಬುಕ್ ಪರಿಶೀಲಿಸುತ್ತಿದ್ದಾಗ ಪುನೀತ್ ಕೆರೆಹಳ್ಳಿ ಅವರ ಫೇಸ್‌ಬುಕ್ ಖಾತೆಯಲ್ಲಿ ಎರಡು ಸಮುದಾಯಗಳ ನಡುವೆ ಕೋಮು ಪ್ರಚೋದನೆ ಉಂಟು ಮಾಡಿ ಸಮಾಜದ ಶಾಂತಿ ಸುವ್ಯವಸ್ಥೆಯನ್ನು ಹಾಳು ಮಾಡಲು ಪ್ರಯತ್ನಿಸುವಂತಹ ರೀಲ್ಸ್ ಅಪ್‌ಲೋಡ್ ಮಾಡಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.