ನೀರಾವರಿ ಹೋರಾಟದಲ್ಲಿ ಭಾಗಿಯಾದ ಕೃಷಿಕರ ಮೇಲಿನ ಪ್ರಕರಣ ಹಿಂಪಡೆಯಲು ಸಿಎಂ ಜತೆಗೆ ಮಾತನಾಡುವೆ: ಸಚಿವ ರಮೇಶ್ ಜಾರಕಿಹೊಳಿ

Ramesh Jarakiholi
Published on

ಬೆಂಗಳೂರು: ಮಹಾದಾಯಿ ಯೋಜನೆಗೆ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ಆದಷ್ಟು ಶೀಘ್ರ ಕಾಮಗಾರಿ ಆರಂಭಿಸುತ್ತೇವೆ. ಕಳಸಾಬಂಡೂರಿ ಯೋಜನೆಯ ಡಿಪಿಆರ್ ಸಿದ್ದವಿದೆ.ಅದನ್ನು ನ್ಯಾಯಾಧೀಕರಣಕ್ಕೆ ತೋರಿಸಿ ಶೀಘ್ರ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಮಗಾರಿ ಆರಂಭಿಸಲು ನ್ಯಾಯಾಲಯ, ಪರಿಸರ ಇಲಾಖೆ ಹಾಗು ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಪಡೆಯಬೇಕಾಗಿದೆ. ಆದರೆ ನೀರು ಭಾವನಾತ್ಮಕ ವಿಷಯ.ಹಾಗಾಗಿ ಯಾರೂ ಸಂಭ್ರಮಾಚರಣೆ ಮಾಡುವುದು ಬೇಡ.ಅತಿ ಶೀಘ್ರದಲ್ಲೇ ನಮ್ಮ ಪಾಲಿನ ನೀರಿನ ಬಳಕೆಗೆ ಅಗತ್ಯ ಕ್ರಮ ಕೈಗೊಳ್ಳುತ್ತೇವೆ ಎಂದರು.

ದಶಕಗಳ ಹೋರಾಟದ ಬಳಿಕ ನಮಗೆ ನ್ಯಾಯ ಸಿಕ್ಕಿದೆ, ನೀರಿನ ಸದ್ಬಳಕೆ ಬಗ್ಗೆ ಕ್ರಮ ಕೈಗೊಳ್ಳಲಾಗಿದೆ. ಜುಲೈನಲ್ಲಿ ಮಹದಾಯಿ ವಿವಾದದ ಬಗ್ಗೆ ಅಂತಿಮ ತೀರ್ಪು ಹೊರಬೀಳುವ ಸಾಧ್ಯತೆ ಇದೆ.ಆಗ ರಾಜ್ಯಕ್ಕೆ ಮತ್ತಷ್ಟು ಹೆಚ್ಚಿನ ಪಾಲು ಸಿಗುವ ನಿರೀಕ್ಷೆ ಇದೆ ಎಂದ ಅವರು, ಮಹಾದಾಯಿ ಸೇರಿ ವಿವಿಧ ನೀರಾವರಿ ಹೋರಾಟಗಳಲ್ಲಿ ಭಾಗಿಯಾಗಿದ್ದ ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆಯಬೇಕು ಎಂಬುದು ನಮ್ಮ ಇಚ್ಛೆ. ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಆದಷ್ಟು ಶೀಘ್ರದಲ್ಲಿ ಪ್ರಕರಣಗಳನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net