ಬಿಜೆಪಿಯವರು ಗಂಭೀರವಾಗಿ ತೆಗೆದುಕೊಳ್ಳಬೇಕು

JS
Published on

ಹುಬ್ಬಳ್ಳಿ: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಹಣದ ವ್ಯವಹಾರ ನಡೆದಿದೆ ಎನ್ನುವುದಾದರೆ ಪಕ್ಷದವರು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕನಕಗಿರಿಯಲ್ಲಿ ಟಿಕೆಟ್ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಎಫ್​ಐಆರ್ ಆಗಿದೆ. ಇನ್ನು ಹಲವಾರು ಕಡೆ ದೂರು ಸಲ್ಲಿಕೆಯಾಗಬಹುದು. ಹಿರಿಯರಿಗೆ ಟಿಕೆಟ್ ನಿರಾಕರಿಸಿದ್ದು ಯಾಕೆ ಎಂಬುದು ಈಗ ಗೊತ್ತಾಗುತ್ತಿದೆ. ಈ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.

ರಾಮದುರ್ಗದಲ್ಲಿ ರಿಯಲ್ ಎಸ್ಟೇಟ್ ವ್ಯಕ್ತಿಗೆ ಟಿಕೆಟ್ ಕೊಡ್ತಾರೆ. ಇದರ ಮೇಲೆ ಅರ್ಥ ಮಾಡಿಕೊಳ್ಳಿ. ಏನೋ ವ್ಯವಹಾರ ನಡೆದಿದೆ ಎಂಬುದಂತೂ ಸತ್ಯ. ಚೈತ್ರಾ ಕುಂದಾಪುರ ಇಂದು ಅಪರಾಧಿ ಸ್ಥಾನದಲ್ಲಿ ನಿಂತಿದ್ದಾರೆ. ಈ ಪ್ರಕರಣದ ನಂತರ ಕೆಲವರಿಗೆ ಧೈರ್ಯ ಬಂದಿದೆ. ಇನ್ನು ಕೆಲವರು ದೂರು ನೀಡಬಹುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net