ಕ್ರೆಡಿಟ್ ಕಾರ್ಡ್ ಮೂಲಕ ಹಣ ವರ್ಗಾವಣೆ ಇಬ್ಬರು ಟಿಬೆಟಿಯನ್ ಪ್ರಜೆಗಳ ಬಂಧನ

IMG-20211111-WA0019
Published on

ಮಂಗಳೂರು : ಕ್ರೆಡಿಟ್ ಕಾರ್ಡ್ ಮೂಲಕ ಸಾರ್ವಜನಿಕರ ಗಮನಕ್ಕೆ ಬಾರದೆ ಮೋಸದಿಂದ ಹಣ ವರ್ಗಾವಣೆ ಮಾಡುತ್ತಿದ್ದ ಇಬ್ಬರು ಟಿಬೆಟಿಯನ್ ಪ್ರಜೆಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡುನಲ್ಲಿರುವ ಟಿಬೆಟಿಯನ್ ಕಾಲನಿಯಲ್ಲಿ ವಾಸವಿದ್ದ ಲೋಬಸಂಗ್ ಮತ್ತು ದಕಪ ಪುಂದೇ ಎಂಬುವರನ್ನು ಬಂಧಿಸಿದ್ದಾರೆ.
ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net