ಗೋಡಂಬಿ ಕಳ್ಳರ ಬಂಧನ

beeja kaluva
Published on

ಉಡುಪಿ: ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಮುಂಡ್ಕಿನ್ ಜೆಡ್ಡು ಎಂಬಲ್ಲಿ ಅ.26ರಂದು ವಿಜಯದುರ್ಗಾ ಗೇರು ಬೀಜ ಕಾರ್ಖಾನೆಯಲ್ಲಿ ಸಂಗ್ರಹಿಸಿಟ್ಟಿದ್ದ 1.40 ಲಕ್ಷ ರೂ. ಮೌಲ್ಯದ ಗೋಡಂಬಿ ಕಳ್ಳತನ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪುತ್ತೂರು ತಾಲೂಕು ಇಂದಿರಾ ನಗರ ನಿವಾಸಿ ಸೈಯದ್ ಮೊಹಮ್ಮದ್ ಬಶೀರ್(37) ಮತ್ತು ಬಂಟ್ವಾಳ ಮಿತ್ತೂರು ನಿವಾಸಿ ಉಮ್ಮರ್ ಫಾರೂಕ್ (36) ಎಂದು ಗುರುತಿಸಲಾಗಿದೆ.

ಬಂಧಿತ ಆರೋಪಿತಗಳಿಂದ ನಾಲ್ಕು ಲಕ್ಷ ಮೌಲ್ಯದ ಮಾರುತಿ ಸುಜುಕಿ ಸ್ವಿಪ್ಟ್ ಕಾರು, ಕಳವು ಮಾಡಿದ 1,40 ಲಕ್ಷ ರೂ. ಮೌಲ್ಯದ ಗೇರು ಬೀಜದ ಡಬ್ಬ ಹಾಗೂ ಆರೋಪಿಗಳ ವಶದಲ್ಲಿದ್ದ 12 ಸಾವಿರ ಮೌಲ್ಯದ ಮೊಬೈಲ್ ಫೋನ್ ಸೇರಿ ಒಟ್ಟು ಸುಮಾರು 5,52 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಆರೋಪಿಗಳ ವಿರುದ್ಧ ಉಡುಪಿ ಜಿಲ್ಲೆಯ ಹೆಬ್ರಿ ಪೊಲೀಸ್ ಠಾಣೆ ಮತ್ತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಇದೇ ಮಾದರಿಯ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net