ಉಪವಿಭಾಗಾಧಿಕಾರಿ ಮಾತಿಗೆ ಮಣೆ, ಧರಣಿ ಅಂತ್ಯ

04 svl
Published on

ಸಾಸ್ವೆಹಳ್ಳಿ: ಹೊನ್ನಾಳಿ ತಾಲೂಕಿನ ಕ್ಯಾಸಿನಕೆರೆ ಗ್ರಾಮದ ಸೂರಮಟ್ಟಿ ಜನವಸತಿ ಪ್ರದೇಶದ ನಿವಾಸಿಗಳು ನಿವೇಶನ ಹಕ್ಕುಪತ್ರ ನೀಡಲು ಆಗ್ರಹಿಸಿ ಎರಡು ದಿನಗಳಿಂದ ನಡೆಸುತ್ತಿದ್ದ ಧರಣಿ ಗುರುವಾರ ಮುಕ್ತಾಯಗೊಂಡಿದೆ.

ಗ್ರಾಪಂ ಕಚೇರಿಯ ಎದುರು ನಡೆಯುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಹೊನ್ನಾಳಿ- ಚನ್ನಗಿರಿ ಉಪ ವಿಭಾಗಾಧಿಕಾರಿ ವಿ. ಅಭಿಷೇಕ್ ಭೇಟಿ ನೀಡಿ, ಪ್ರತಿಭಟನಾ ನಿರತರು, ಸ್ಥಳೀಯ ಗ್ರಾಪಂ ಅಧಿಕಾರಿಗಳು ಮತ್ತು ಆಡಳಿತ ಮಂಡಳಿಯೊಂದಿಗೆ ರ್ಚಚಿಸಿದರು. ನಂತರ ಜನವಸತಿ ಪ್ರದೇಶದ ಸ್ಥಳ ಪರಿಶೀಲನೆ ಮಾಡಿ ಗ್ರಾಪಂ ಲೇಔಟ್ ಯೋಜಿಸಿ ನಿವೇಶನ ಹಂಚಿಕೆ ಮಾಡುವ ಸಲಹೆ ನೀಡಿದ್ದರ ಮೇರೆಗೆ ಪ್ರತಿಭಟನೆ ಕೈ ಬಿಡಲಾಯಿತು.

ಈ ವೇಳೆ ಎಸಿ ವಿ. ಅಭಿಷೇಕ್ ಮಾತನಾಡಿ, ಈ ಜನವಸತಿ ಪ್ರದೇಶವನ್ನು ಕಂದಾಯ ಇಲಾಖೆಯಿಂದ ಸ್ಥಳೀಯ ಗ್ರಾಪಂಗೆ ಹಸ್ತಾಂತರ ಮಾಡಲಾಗಿದೆ. ಇಲ್ಲಿನ ನಿವಾಸಿಗಳು ಮತ್ತು ಗ್ರಾಪಂ ಆಡಳಿತ ಮಂಡಳಿ ಒಮ್ಮತದ ತೀರ್ಮಾನ ಕೈಗೊಂಡು ಲೇಔಟ್ ಪ್ಲಾನ್ ಮಾಡಿದಲ್ಲಿ ಶಾಶ್ವತ ಪರಿಹಾರ ದೊರೆಯಲಿದೆ ಎಂದು ಸಲಹೆ ನೀಡಿದರು.

ತಹಸೀಲ್ದಾರ್ ಪಟ್ಟರಾಜೇಗೌಡ, ತಾಪಂ ಕಾರ್ಯ ನಿರ್ವಹಣಾಧಿಕಾರಿ ಪ್ರಕಾಶ್, ಉಪ ತಹಸೀಲ್ದಾರ್ ಚಂದ್ರಪ್ಪ, ರಾಜಸ್ವ ನಿರೀಕ್ಷಕ ದಿನೇಶ್ ಬಾಬು, ಸ್ಥಳೀಯ ಗ್ರಾಪಂ ಅಧ್ಯಕ್ಷೆ ಕಾವ್ಯ ರವಿಕುಮಾರ್, ಉಪಾಧ್ಯಕ್ಷ ಮಂಜುನಾಥ್, ಪಿಡಿಒ ರವಿಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net