ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗ್ರಹಣ

Centre-Confirms-Caste-Census-to.jpg
Published on

ತುಮಕೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಸಿಎಂ ಸಿದ್ದರಾಮಯ್ಯ ಶುಕ್ರವಾರ ಜಿಲ್ಲಾಧಿಕಾರಿ, ಜಿಪಂ ಸಿಇಒ ಜತೆ ನಡೆಸಿದ ವಿಡಿಯೊ ಕಾನ್ಫರೆನ್ಸ್​ ಬೆನ್ನಹಿಂದೆಯೇ ಜಿಲ್ಲೆಯೆಲ್ಲೆಡೆ ಸಮೀಕ್ಷೆ ಚುರುಕಾಗಿದೆ.

ಸಾಕಷ್ಟು ತಾಂತ್ರಿಕ ಸಮಸ್ಯೆಗಳ ನಡುವೆಯೂ ಶುಕ್ರವಾರದವರೆಗೆ ಜಿಲ್ಲೆಯಲ್ಲಿ 11790 ಮನೆಗಳಲ್ಲಿ ಮಾಹಿತಿ ಸಂಗ್ರಹಿಸಲಾಗಿದ್ದು ಇನ್ನುಳಿದ ದಿನಗಳಲ್ಲಿ 7 ಲಕ್ಷಕ್ಕೂ ಹೆಚ್ಚು ಮನೆಗಳಲ್ಲಿ ಮಾಹಿತಿ ಸಂಗ್ರಹಿಸಲು ಸಮೀೆಗೆ ನಿಯೋಜನೆಯಾಗಿರುವ ಶಿಕ್ಷಕರಿಗೆ ಒತ್ತಡ ಮಾಡಲಾಗುತ್ತಿದೆ. ತುಮಕೂರು ತಾಲೂಕಿನಲ್ಲಿ 2168, ಗುಬ್ಬಿ 1969 ಮನೆಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು ಚಿಕ್ಕನಾಯಕನಹಳ್ಳಿ, ಪಾವಗಡ ಹಾಗೂ ತುಮಕೂರು ತಾಲೂಕುಗಳಲ್ಲಿ ನಿರೀತ ಗುರಿ ತಲುಪಲು ಸಾಧ್ಯವಾಗಿಲ್ಲ.

6544 ಶಿಕ್ಷಕರು ಜಿಲ್ಲೆಯಲ್ಲಿ ಸಮೀಕ್ಷೆ ಆರಂಭಿಸಿದ್ದು ಪ್ರತಿದಿನ 10ರಿಂದ 15 ಮನೆಗಳಲ್ಲಿ ಸಮೀಕ್ಷೆ ನಡೆಸಲು ಗುರಿ ನೀಡಲಾಗಿದೆ ಆದರೆ, ಶೇ.50ರಷ್ಟು ಶಿಕ್ಷಕರು ಒಂದು ಮನೆಯ ಸಮೀಕ್ಷೆ ಮಾಡಲು ಸಾಧ್ಯವಾಗಿಲ್ಲ, ತಂತ್ರಾಂಶದಲ್ಲಿ ತಾಂತ್ರಿಕ ಕೊರತೆಯಿಂದ ಸಮೀೆ ಹಿಂದುಳಿದಿದೆ. ಮೇಲಾಧಿಕಾರಿಗಳು ಜವಬ್ಧಾರಿಯನ್ನು ಶಿಕ್ಷಕರ ಮೇಲಾಕಿದ್ದು ನೆಟ್​ವರ್ಕ್​ ಸರಿಪರಿಸಲು ಕ್ರಮಕೈಗೊಳ್ಳಬೇಕಿದೆ.

ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಲು  ಜಿಲ್ಲಾಧಿಕಾರಿ ಶುಭಕಲ್ಯಾಣ್​ಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದು ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ರ್ನಿಲಕ್ಷ್ಯ ವಹಿಸಬಾರದು. ರ್ನಿಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ರವಾನಿಸಿದೆ.

ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿದೆ, ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ ಎಂದು ಮೇಲಾಧಿಕಾರಿಗಳು ಹೇಳಿಕೆ ನೀಡುತ್ತಿದ್ದು ವಾಸ್ತವದಲ್ಲಿ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಸಾಧ್ಯವಾಗುತ್ತಿಲ್ಲ. ಎಲ್ಲದಕ್ಕೂ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿದ್ದು ನೋಟಿಸ್​ ನೀಡುವ ಎಚ್ಚರಿಕೆ ಕೂಡ ನೀಡಲಾಗಿದೆ.

ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಲು ಅಗತ್ಯಬಿದ್ದರೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆ ಪಡೆದುಕೊಳ್ಳಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್​ ಅಧಿಕಾರಿಯಾಗಿ ನೇಮಕ ಮಾಡಲಾಗುತ್ತಿದೆ.

ಆರಂಭದಲ್ಲಿ ಕಾಣಿಸಿಕೊಂಡ ತಾಂತ್ರಿಕ ಸಮಸ್ಯೆಗಳನ್ನು ಬಹುತೇಕ ನಿವಾರಿಸಲಾಗಿದ್ದು ಸಮೀಕ್ಷೆ ವೇಗ ಪಡೆದುಕೊಂಡಿದೆ. ಪ್ರತಿದಿನ 10 ರಿಂದ 15 ಮನೆಗಳಲ್ಲಿ ಸಮೀಕ್ಷೆ ಪೂರ್ಣಗೊಳಿಸಿ ಎಂದು ಸಮೀಾದಾರರನ್ನು ಕೋರಲಾಗಿದೆ. ಎಲ್ಲಾ 6544 ಶಿಕ್ಷಕರ ಸಹಕಾರದಲ್ಲಿ ಅಕ್ಟೋಬರ್​ 7ರೊಳಗೆ ಜಿಲ್ಲೆಯ 7 ಲಕ್ಷಕ್ಕೂ ಹೆಚ್ಚು ಕುಟುಂಬಗಳ ಸಮೀಕ್ಷೆ ಪೂರ್ಣಗೊಳಿಸಲಾಗುವುದು. ಈರಣ್ಣ ಜಿಲ್ಲಾ ಅಧಿಕಾರಿ, ಬಿಸಿಎಂ ಇಲಾಖೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net