ಆಧುನಿಕ ಸಮಾಜಕ್ಕೆ ಜಾತಿ ಪದ್ಧತಿ, ಅಸ್ಪಶ್ಯತೆ ಕಪ್ಪು ಚುಕ್ಕೆ

01 KRN-2
ಕೆ.ಆರ್.ನಗರ ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ನಡೆದ ವಿಚಾರ ಗೋಷ್ಠಿಯಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು. ಜಿ.ಸುರೇಂದ್ರಮೂರ್ತಿ, ವಿ.ಪಿ.ಕುಲದೀಪ್, ಸಿ.ಎಂ.ಅಣ್ಣಯ್ಯ, ಡಾ.ಡಿ.ನಟರಾಜು, ಸೈಯದ್‌ಜಾಬೀರ್, ಅನಂತ್, ತಿಮ್ಮಶೆಟ್ಟಿ, ಕಳ್ಳಿಮುದ್ದನಹಳ್ಳಿ ಚಂದ್ರು, ಡಿ.ಕೆ.ಕೊಪ್ಪಲುರಾಜಯ್ಯ ಇನ್ನಿತರರು ಹಾಜರಿದ್ದರು.
Published on

ಕೆ.ಆರ್.ನಗರ : ಜಾತಿ ಪದ್ಧತಿಯನ್ನು ನಿರ್ಮೂಲನೆ ಮಾಡಿ ಪ್ರತಿಯೊಬ್ಬರು ಸಮಾನತೆಯಿಂದ ಸಹಬಾಳ್ವೆ ನಡೆಸಬೇಕು ಎಂದು ಶಾಸಕ ಡಿ.ರವಿಶಂಕರ್ ಹೇಳಿದರು.

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಶನಿವಾರ ಆಯೋಜಿಸಿದ್ದ ವಿಚಾರಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದರು.ಅಸ್ಪಶ್ಯತೆ ಆಚರಣೆ ಶಿಕ್ಷಾರ್ಹ ಅಪರಾಧ. ಇದನ್ನು ಪ್ರತಿಯೊಬ್ಬರು ವಿರೋಧಿಸಬೇಕು ಎಂದು ತಿಳಿಸಿದರು.

ಆಧುನಿಕ ಸಮಾಜಕ್ಕೆ ಜಾತಿ ಪದ್ಧತಿ ಮತ್ತು ಅಸ್ಪಶ್ಯತೆ ಕಪ್ಪು ಚುಕ್ಕೆ. ಇದನ್ನು ಹೋಗಲಾಡಿಸಲು ಎಲ್ಲರೂ ಕೈಜೋಡಿಸಬೇಕು. ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಫಲವಾಗಿ ಅಸ್ಪಶ್ಯತೆ ಆಚರಣೆ ಕಡಿಮೆಯಾಗಿದ್ದು, ಅದನ್ನು ಸಂಪೂರ್ಣವಾಗಿ ತೊಡೆದು ಹಾಕಲು ನಾವೆಲ್ಲರೂ ಕಟಿಬದ್ಧ್ದರಾಗಿ ಕೆಲಸ ಮಾಡಿ ಸಂವಿಧಾನ ಶಿಲ್ಪಿಯ ಆಶಯಗಳನ್ನು ಈಡೇರಿಸಲು ಪಣತೊಡಬೇಕು ಎಂದು ಕರೆ ನೀಡಿದರು.

ಕೆಳ ವರ್ಗದ ನೌಕರರು, ಶೋಷಿತ ಸಮಾಜದವರನ್ನು ಮೇಲೆತ್ತಿ ಅವರು ಸಮಾಜದ ಮುಖ್ಯ ವಾಹಿನಿಗೆ ಬರುವ ಕೆಲಸ ಮಾಡಿದಾಗ ಅವರ ಸೇವೆಗೆ ಗೌರವ ಸಿಗಲಿದೆ. ಅವರೊಂದಿಗೆ ನಾವೆಲ್ಲರೂ ಕೈ ಜೋಡಿಸಿದಾಗ ಸಮಾನತೆ ಮತ್ತು ಸದೃಢ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ತಹಸೀಲ್ದಾರ್ ಜಿ.ಸುರೇಂದ್ರಮೂರ್ತಿ, ಇಒ ವಿ.ಪಿ.ಕುಲದೀಪ್, ಸಿಡಿಪಿಒ ಸಿ.ಎಂ.ಅಣ್ಣಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಡಿ.ನಟರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಲ್.ಶಂಕರ್‌ಮೂರ್ತಿ, ಪುರಸಭೆ ಮಾಜಿ ಅಧ್ಯಕ್ಷ ನರಸಿಂಹರಾಜು, ತಾಲೂಕು ಕಾಂಗ್ರೆಸ್ ವಕ್ತಾರ ಸೈಯದ್‌ಜಾಬೀರ್, ವಕೀಲ ಅನಂತ್, ಮುಖಂಡರಾದ ತಿಮ್ಮಶೆಟ್ಟಿ, ಕಳ್ಳಿಮುದ್ದನಹಳ್ಳಿ ಚಂದ್ರು, ಡಿ.ಕೆ.ಕೊಪ್ಪಲುರಾಜಯ್ಯ ಸೇರಿದಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net