

ರಾಯಚೂರು: ನಾವು ಪಡೆದಿರುವ ಜ್ಞಾನವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹೀಗಾಗಿ ವಿದ್ಯಾರ್ಥಿಗಳು ಜೀವನದಲ್ಲಿ ಜ್ಞಾನದ ಕೋಟೆಯನ್ನು ಕಟ್ಟಿಕೊಂಡಾಗ ಮಾತ್ರ ಯಶಸ್ಸು ಪಡೆಯಲು ಸಾಧ್ಯವಾಗಲಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಕಾರಿ ಬಿ.ನಿಖಿಲ್ ಹೇಳಿದರು.
ಸ್ಥಳೀಯ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತದಿಂದ ಪದವಿ ವಿದ್ಯಾರ್ಥಿಗಳು ಹಾಗೂ ಉದ್ಯೋಕಾಂಕ್ಷಿಗಳಿಗಾಗಿ ಗುರುವಾರ ಏರ್ಪಡಿಸಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು.
ಜ್ಞಾನದಿಂದ ಮಾತ್ರ ಯಶಸ್ಸು ಸಾಸಲು ಸಾಧ್ಯ. ವಿದ್ಯಾರ್ಥಿಗಳು ಪಠ್ಯಕ್ರಮ, ಪ್ರಶ್ನೆ ಪತ್ರಿಕೆ, ದಿನಪತ್ರಿಕೆ ಓದುವ ಮೂಲಕ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಪ್ರಸ್ತುತ ದಿನಮಾನದಲ್ಲಿ ಮಾನವೀಯ ವೌಲ್ಯ ಕಾಣೆಯಾಗುತ್ತಿದ್ದು, ಅನ್ಯಾಯ, ಮೋಸ, ವಂಚನೆಗಳು ಹೆಚ್ಚಾಗಿವೆ. ವಿದ್ಯಾರ್ಥಿಗಳು ಕೆಟ್ಟ ವಿಚಾರಗಳನ್ನು ಬಿಟ್ಟು ಮಾನವೀಯ ವೌಲ್ಯ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಜಿ.ಪಂ. ಸಿಇಒ ರಾಹುಲ್ ತುಕಾರಾಮ್ ಪಾಂಡ್ವೆ ಮಾತನಾಡಿ, ಪ್ರಸ್ತುತ ಜಗತ್ತಿನಲ್ಲಿ ತಂತ್ರಜ್ಞಾನ ಅತ್ಯಂತ ವೇಗವಾಗಿ ಮುಂದುವರೆಯುತ್ತಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಅರಿತುಕೊಂಡು ಅದನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರೋಬೆಷನರಿ ಐಎಎಸ್ ಅಕಾರಿ ಸಾಹಿತ್ಯ ಆಲದಕಟ್ಟೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಕಾರಿ ರಾಜೇಂದ್ರ ಜಲ್ದಾರ್, ಹಿಂದುಳಿದ ವರ್ಗಗಳ ಕಲ್ಯಾಣಾಕಾರಿ ಡಾ.ವಾಲ್ಮೀಕಿ, ಅಲ್ಪ ಸಂಖ್ಯಾತರ ಕಲ್ಯಾಣಾಕಾರಿ ಸಂಗಮೇರ್ಶವರ, ಕೌಶಲ್ಯಾಭಿವೃದ್ಧಿ ಅಕಾರಿ ಜಿ.ಯು.ಹುಡೇದ್, ವಾರಿಯರ್ಸ್ ಅಕಾಡೆಮಿಯ ಎಚ್.ಎಸ್.ಮಂಜುನಾಥ, ಸಾಧನಾ ಅಕಾಡೆಮಿಯ ಬಿ.ಮಂಜುನಾಥ, ಮಹತ್ವಾಕಾಂಕ್ಷಿ ಜಿಲ್ಲೆ ಕಾರ್ಯಕ್ರಮ ಅಕಾರಿ ಯುಸ್ೂ ಅಲಿ ಉಪಸ್ಥಿತರಿದ್ದರು.