

ಉಡುಪಿ: ಯುವಜನತೆ ಸಾಮಾಜಿಕ ಜಾಲತಾಣಗಳತ್ತ ಹೆಚ್ಚಿನ ಆಸಕ್ತಿ ತೋರುತ್ತಿದ್ದು ಪುಸ್ತಕಗಳನ್ನು ಕೊಂಡು ಓದುವವರ ಸಂಖ್ಯೆ ವಿರಳವಾಗುತ್ತಿದೆ. ಯುವಜನರು ಸಾಹಿತ್ಯ ಕೃತಿಗಳನ್ನು ಒದುವತ್ತ ಪ್ರೋತ್ಸಾಹ ನೀಡಬೇಕು ಎಂದು ಲೇಖಕಿ ವಿನಿಶಾ ರೊಡ್ರಿಗಸ್ ಹೇಳಿದರು.
ಭಾನುವಾರ ಅಂಬಾಗಿಲು ಸಮೀಪದ ಕಕ್ಕುಂಜೆ ಅನುಗ್ರಹ ಪಾಲನಾ ಕೇಂದ್ರದಲ್ಲಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ವತಿಯಿಂದ ನೀಡಲಾಗುವುದು ದಾಂತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.
ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ ರೂ. 25 ಸಾವಿರ ನಗದು ಮತ್ತು ಸ್ಮರಣಿಕೆಯೊಂದಿಗೆ ಲೇಖಕಿ ವಿನಿಶಾ ರೊಡ್ರಿಗಸ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ದಾಂತಿ ಪುರಸ್ಕಾರ ಸಮಿತಿ ಸಂಚಾಲಕ ಆಲ್ಫೋನ್ಸ್ ಡಿಕೋಸ್ತಾ ಪ್ರಶಸ್ತಿ ಪುರಸತರ ಪರಿಚಯ ನೆರವೇರಿಸಿ, ಸಂಚಾಲಕ ಡಾ.ಜೆರಾಲ್ಡ್ ಪಿಂಟೊ ದಿ.ಡೆನಿಸ್ ಡಿಸಿಲ್ವಾ ಲೇಖನ ಸ್ಪರ್ಧೆಯ ವಿಜೇತರ ವಿವರ ನೀಡಿದರು.
ಅಧ್ಯಕ್ಷತೆಯನ್ನು ಕಥೊಲಿಕ್ ಸಭಾ ಅಧ್ಯಕ್ಷರಾದ ಸಂತೋಷ್ ಕರ್ನೆಲಿಯೋ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಅರಣ್ಯ ಸಂರಕ್ಷಾಣಾಧಿಕಾರಿ ಕ್ಲಿಫರ್ಡ್ ಲೋಬೊ, ಉಡುಪಿ ಜಿಲ್ಲಾ ಸಣ್ಣ ಕೈಗಾರಿಕೆಗಳ ಸಂಘದ ಮಾಜಿ ಅಧ್ಯಕ್ಷ ಜಾನ್ ಡಿಸಿಲ್ವಾ, ಉಡುಪಿ ಧರ್ಮಪ್ರಾಂತ್ಯದ ವಿಕಾರ್ ಜನರಲ್ ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಕಥೊಲಿಕ್ ಸಭಾ ನಿಕಟಪೂರ್ವ ಅಧ್ಯಕ್ಷ ಮೇರಿ ಡಿಸೋಜಾ, ನಿಯೋಜಿತ ಅಧ್ಯಕ್ಷ ರೊನಾಲ್ಡ್ ಆಲ್ಮೇಡಾ, ಉಪಾಧ್ಯಕ್ಷ ಸೊಲೊಮನ್ ಆಲ್ವಾರಿಸ್, ಸಹಕಾರ್ಯದರ್ಶಿ ಲೂಯಿಸ್ ಡಿಸೋಜಾ, ಲೆಸ್ಲಿ ಕರ್ನೆಲಿಯೋ, ವಲಯ ಅಧ್ಯಕ್ಷರಾದ ರೋಸಿ ಕ್ವಾಡ್ರಸ್, ಜುಲಿಯೆಟ್ ಡಿಸೋಜಾ, ವಿಲ್ಸನ್ ಡಿ ಆಲ್ಮೇಡಾ, ವಿಲ್ಸನ್ ಮಸ್ಕರೇನಸ್, ಶಾಂತಿ ಪಿರೇರಾ ಉಪಸ್ಥಿತರಿದ್ದರು.