ಚರ್ಮಗಂಟು ರೋಗ ಹಿನ್ನೆಲೆ: ಮೈಸೂರಿನಲ್ಲಿ ಜಾನುವಾರು ಸಾಗಾಟಕ್ಕೆ ನಿಷೇಧ

Cow
Published on

ಮೈಸೂರು: ಜಾನುವಾರುಗಳಲ್ಲಿ ಚರ್ಮಗಂಟು ರೋಗ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಡಿ.10ರವರೆಗೆ ಜಾನುವಾರುಗಳ ಸಾಗಾಟ ಹಾಗೂ ಸಂತೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.

ತಿ.ನರಸೀಪುರ, ಸರಗೂರು ಮತ್ತು ಕೆ.ಆರ್.ನಗರ ತಾಲೂಕುಗಳಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗ ಕಾಣಿಸಿಕೊ ಂಡಿದ್ದು, ಮುಂಜಾಗೃತ ಕ್ರಮವಾಗಿ ಲಸಿಕೆ ಹಾಕುವ ಕಾರ್ಯ ಪ್ರಗತಿಯಲ್ಲಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net