ಹೋಟೆಲ್ ಮ್ಯಾನೇಜ್ಮೆಂಟ್ ಕೋರ್ಸ್ ಆರಂಭ: ಟ್ರಸ್ಟ್‌ನ ಕಾರ್ಯದರ್ಶಿ ಪ್ರೊ.ಟಿ.ನಾಗೇಂದ್ರ ಮಾಹಿತಿ

Cauvery Education and Research Trust Press Conference Mandya
Published on

ಮಂಡ್ಯ: ತಾಲೂಕಿನ ಸಿದ್ದಯ್ಯನಕೊಪ್ಪಲು ಗೇಟ್ ಬಳಿ ಇರುವ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನಿಂದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಹೊಟೇಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಪ್ರಾರಂಭಿಸಲಾಗುವುದು ಎಂದು ಕಾವೇರಿ ಎಜುಕೇಷನ್ ಮತ್ತು ರಿಸರ್ಚ್ ಟ್ರಸ್ಟ್ ಕಾರ್ಯದರ್ಶಿ ಪ್ರೊ.ಟಿ.ನಾಗೇಂದ್ರ ತಿಳಿಸಿದರು.

ದೊಡ್ಡ ನಗರಗಳಲ್ಲಿ ಮಾತ್ರ ಹೊಟೇಲ್ ಮ್ಯಾನೇಜ್‌ಮೆಂಟ್ ಕೋರ್ಸ್ ನಡೆಸಲಾಗುತ್ತಿದೆ. ಆದರೆ, ಗ್ರಾಮೀಣ ಭಾಗದಲ್ಲಿರುವ ಕಾಲೇಜುಗಳಲ್ಲಿ ಈ ಕೋರ್ಸ್ ಇರುವುದಿಲ್ಲ. ಈ ನಿಟ್ಟಿನಲ್ಲಿ ಕಡಿಮೆ ಶುಲ್ಕದಲ್ಲಿ ಕೋರ್ಸ್ ಪ್ರಾರಂಭಿಸಲಾಗುತ್ತಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇದಲ್ಲದೆ ಎಂಸಿಎ ಮತ್ತು ಇನ್ಫ್‌ರ್ಮೇಷನ್ ಸೈನ್ ಆ್ಯಂಡ್ ಇಂಜಿನಿಯರಿಂಗ್ ಕೋರ್ಸ್ ಕೂಡ ಆರಂಭಿಸಲಾಗುತ್ತಿದೆ. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಾರಂಭಿಸಿರುವ ರಿಸರ್ಚ್ ಸೆಂಟರ್‌ನಿಂದ ಐವರು ಅಭ್ಯರ್ಥಿಗಳು ಪಿಎಚ್.ಡಿ ಪದವಿಯನ್ನು ಪಡೆದಿರುತ್ತಾರೆ. ಪ್ರಸಕ್ತ ಸಾಲಿನ ಎಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯುನಿಕೇಷನ್ ಇಂಜಿನಿಯರಿಂಗ್ ವಿಭಾಗ ಮತ್ತು ರಸಾಯನಶಾಸ್ತ್ರ ವಿಭಾಗದಲ್ಲಿ ರಿಸರ್ಚ್ ಸೆಂಟರನ್ನು ಪ್ರಾರಂಭಿಸಿದ್ದೇವೆ. ದಶಮಾನೋತ್ಸವದ ಸಂಭ್ರಮದಲ್ಲಿರುವ ನಮ್ಮ ಕಾಲೇಜಿನಲ್ಲಿ ಈವರೆಗೆ 845 ವಿದ್ಯಾರ್ಥಿಗಳನ್ನು ವಿವಿಧ ಕಂಪನಿಗಳು ಕ್ಯಾಂಪಸ್ ಸೆಲೆಕ್ಷನ್ ಮಾಡಿಕೊಂಡು ಉದ್ಯೋಗ ನೀಡಿವೆ. ಇನ್ನೂ 150 ವಿದ್ಯಾರ್ಥಿಗಳು ಆಯ್ಕೆಯಾಗುವ ನಿರೀಕ್ಷೆ ಇದೆ ಎಂದು ವಿವರಿಸಿದರು.

ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಚ್.ಪಿ.ರಾಜು, ಪ್ರಾಂಶುಪಾಲ ಪ್ರೊ.ಶ್ರೀಕಂಠಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net