ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ತಮಿಳುನಾಡಿಗೆ ನೀರುಗಂಟಿಗಳು: ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಭಿನ್ನ ಪ್ರತಿಭಟನೆ

Cauvery protest by BJP workers mandya
Published on

ಮಂಡ್ಯ: ಕಾವೇರಿ ಕಣಿವೆ ಜಲಾಶಯಗಳಿಂದ ತಮಿಳುನಾಡಿಗೆ ನೀರು ಬಿಡುವಂತೆ ಆದೇಶ ಮಾಡಿರುವ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ನೀರು ಹರಿಸುತ್ತಿರುವ ರಾಜ್ಯಸರ್ಕಾರದ ವಿರುದ್ಧ ಜಿಲ್ಲೆಯಲ್ಲಿ ಪ್ರತಿಭಟನೆ ಮುಂದುವರೆದಿದೆ.

ನಗರದ ಸರ್.ಎಂ.ವಿ ಪ್ರತಿಮೆ ಎದುರು ಬಿಜೆಪಿ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಖವಾಡ ಧರಿಸಿ ರಿಂಚು, ಕಟ್ಟರ್, ಪೈಪ್ ಹಿಡಿದು ಧರಣಿ ನಡೆಸಿದರು. ಮಾತ್ರವಲ್ಲದೆ ತಮಿಳುನಾಡಿನ ವಾಟರ್‌ಮ್ಯಾನ್‌ಗಳಂತೆ ವರ್ತಿಸಿ ರಾಜ್ಯದ ರೈತರ ಹಿತ ಕಾಪಾಡಲು ಮುಂದಾಗಿಲ್ಲ ಎಂದು ಸಿಎಂ, ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಹೊಸಹಳ್ಳಿ ಶಿವು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net