ಬರದಿಂದ ತತ್ತರಿಸಿರುವ ಕಾವೇರಿ ಕಣಿವೆ ಜನರಿಗೆ ಮತ್ತೊಂದು ಶಾಕ್: ಬರೋಬರಿ ಒಂದು ತಿಂಗಳು ತಮಿಳುನಾಡಿಗೆ ನೀರು ಹರಿಸುವಂತೆ ಬಂತು ಮತ್ತೊಂದು ಆದೇಶ

Cauvery protest mandya
Published on

ಮಂಡ್ಯ: ಕಾವೇರಿ ನದಿ ನೀರಿನ ವಿಚಾರದಲ್ಲಿ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯವಾಗಿದೆ. ಗುರುವಾರ ದೆಹಲಿಯಲ್ಲಿ ನಡೆದ ಸಭೆಯಲ್ಲಿ ಬರೋಬರಿ ಒಂದು ತಿಂಗಳು ಅಂದರೆ ಡಿ.23ರವರೆಗೆ ಪ್ರತಿದಿನಕ್ಕೆ 2,700 ಕ್ಯೂಸೆಕ್‌ನಂತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.

ಇದು ಜಿಲ್ಲೆಯಲ್ಲಿ ಆಕ್ರೋಶ ಭುಗಿಲೇಳುವಂತೆ ಮಾಡಿದೆ. ಪ್ರಾಧಿಕಾರದ ಅವೈಜ್ಞಾನಿಕ ತೀರ್ಪಿನ ವಿರುದ್ಧ ಕಳೆದ 80 ದಿನದಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಸದಸ್ಯರು, ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಡಿ.23ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ಮಾಡಿರುವುದು ರಾಜ್ಯದ ರೈತ ಸಮೂಹಕ್ಕೆ ಮಾಡಿದ ದ್ರೋಹವಾಗಿದೆ. ಮಾತ್ರವಲ್ಲದೆ ಕಾವೇರಿ ಕಣಿವೆ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಮತ್ತೆ ಮತ್ತೆ ನೀರು ಬಿಡಲು ಏಕಪಕ್ಷೀಯವಾಗಿ ಆದೇಶ ಮಾಡುತ್ತಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಶಿಫಾರಸಿಗೆ ಮಾನ್ಯತೆ ನೀಡಬಾರದು. ಕೆಆರ್‌ಎಸ್ ಸೇರಿದಂತೆ ಇತರೆ ಜಲಾಶಯಗಳಿಂದ ನೀರು ಹರಿಸಬಾರದು ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net