ಕಾವೇರಿ ಹೋರಾಟ: ಮಂಡ್ಯದಲ್ಲಿ ಮುಂದುವರೆದ ಉಪವಾಸ ಸತ್ಯಾಗ್ರಹ

Cauvery protest mandya
Published on

ಮಂಡ್ಯ: ತಮಿಳುನಾಡಿಗೆ ನೀರು ಹರಿಸುವುದನ್ನು ವಿರೋಧಿಸಿ ನಗರದಲ್ಲಿ ನಡೆಯುತ್ತಿರುವ ಉಪವಾಸ ಸತ್ಯಾಗ್ರಹ ಸೋಮವಾರವೂ ಮುಂದುವರೆಯಿತು.

ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಮೂರನೇ ದಿನದ ಸರದಿ ಉಪವಾಸದಲ್ಲಿ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಸದಸ್ಯರು ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು.

ನಗರದ ಸರ್‌ಎಂವಿ ಪ್ರತಿಮೆ ಎದುರು ಉಪವಾಸ ಸತ್ಯಾಗ್ರಹದಲ್ಲಿ ವೈಜ್ಞಾನಿಕ ಸಂಶೋಧನಾ ಪರಿಷತ್‌ನ ಚಿಕ್ಕರಸಿನಕೆರೆ ಸಿ.ಶಿವಲಿಂಗಯ್ಯ, ಕೊಮ್ಮೇರಹಳ್ಳಿ ನರಸಿಂಹಮೂರ್ತಿ, ಮಂಡ್ಯ ಶ್ರೀರಾಮನಗರದ ವೆಂಕಟಚಲಯ್ಯ, ಸಿದ್ದಾರ್ಥ ಬಡಾವಣೆಯ ಜಯರಾಮು, ಆಲಕೆರೆ ಗ್ರಾಮದ ಸತ್ಯಾನಂದಸ್ವಾಮಿ ಭಾಗಿಯಾದರು.

ಅನಿರ್ದಿಷ್ಟಾವಧಿ ಧರಣಿಯಲ್ಲಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ, ರೈತ ಸಂಘದ ಇಂಡವಾಳು ಚಂದ್ರಶೇಖರ್, ಮುದ್ದೇಗೌಡ, ದಸಂಸ ಎಂ.ವಿ.ಕೃಷ್ಣ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net