ಕಾವೇರಿ ಹೋರಾಟ: ಐದನೇ ದಿನವೂ ಮುಂದುವರೆದ ಉಪವಾಸ ಸತ್ಯಾಗ್ರಹ

Cauvery protest mandya
Published on

ಮಂಡ್ಯ: ಕಾವೇರಿಕಣಿವೆ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸಲು ಆದೇಶ ಮಾಡಿರುವ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ, ಪ್ರಾಧಿಕಾರ ಹಾಗೂ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಸರದಿ ಉಪವಾಸ ಐದನೇ ದಿನ ಮುಂದುವರೆದಿದೆ.

ನಗರದ ಸರ್ ಎಂ ವಿ ಪ್ರತಿಮೆ ಎದುರು ಉಪವಾಸದಲ್ಲಿ ಕನ್ನಡ ಸೇನೆಯ ಮಹಾಂತಪ್ಪ, ಎಂ ಎಸ್ ಮಂಜುನಾಥ್ ಬೆಟ್ಟಹಳ್ಳಿ, ಮಹಾದೇವಸ್ವಾಮಿ ರಾಮಂದೂರು, ಮಂಡ್ಯದ ಹೊಸಹಳ್ಳಿಯ ಶಿವು, ಗುತ್ತಲು ಬಡಾವಣೆಯ ಜಿ.ಎಂ.ಚಂದ್ರು ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು.

ಕೃಷ್ಣರಾಜಸಾಗರ ಜಲಾಶಯದಿಂದ ನೆರೆರಾಜ್ಯಕ್ಕೆ ಹರಿಸುತ್ತಿರುವ ನೀರನ್ನು ಸ್ಥಗಿತ ಮಾಡಬೇಕು. ಬೆಳಗಾವಿ ಅಧಿವೇಶನದಲ್ಲಿ ಕಾವೇರಿ ನದಿ ನೀರು ಹಂಚಿಕೆ ಕುರಿತು ಸಮಗ್ರ ಚರ್ಚೆ ನಡೆಸಿ ರಾಜ್ಯದ ಪರ ದೃಢ ನಿರ್ಧಾರ ಕೈಗೊಳ್ಳಬೇಕು, ಬರ ಪರಿಸ್ಥಿತಿಯಲ್ಲಿ ರೈತರ ಹಿತ ಕಾಪಾಡಲು ಮುಂದಾಗಬೇಕು ಎಂದು ಒತ್ತಾಯಿಸಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದ ಜಯರಾಂ. ಬೋರೇಗೌಡ,ರೈತ ಸಂಘದ ಇಂಡು ವಾಳು ಚಂದ್ರಶೇಖರ್,ಮುದ್ದೇಗೌಡ ನೇತೃತ್ವ ವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net