ಕಾವೇರಿ ನೀರಿನ ಬಗ್ಗೆ ಸದನದಲ್ಲಿ ಚರ್ಚಿಸದೇ ರೈತರಿಗೆ ದ್ರೋಹ: ರಾಜ್ಯಸರ್ಕಾರದ ವಿರುದ್ಧ ಆಕ್ರೋಶ

Cauvery protest Mandya
Published on

ಮಂಡ್ಯ: ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯಸರ್ಕಾರ ಹಾಗೂ ಅವೈಜ್ಞಾನಿಕ ಆದೇಶ ಹೊರಡಿಸುತ್ತಿರುವ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಮತ್ತು ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ವಿರುದ್ಧ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಶನಿವಾರ 103 ಹಾಗೂ ಸರದಿ ಉಪವಾಸ ಸತ್ಯಾಗ್ರಹ 22ನೇ ದಿನ ಪೂರೈಸಿತು.

ಸರ್‌ಎಂವಿ ಪ್ರತಿಮೆ ಎದುರು ನಡೆಸುತ್ತಿರುವ ಉಪವಾಸದಲ್ಲಿ ಟಿ.ಬೆಳ್ಳೆಕೆರೆ ಬಿ.ಎಸ್.ನಾಗರಾಜ್, ವಳಗೆರಹಳ್ಳಿ ವೆಂಕಟೇಶ್, ಅರಕೆರೆ ಗ್ರಾಮದ ಆರ್.ಸೋಮಶೇಖರ್, ಎ.ಪಿ.ರವಿ, ಚೆನ್ನಮ್ಮನಕೊಪ್ಪಲು ಸಿ.ಎಲ್.ಮಾಯಣ್ಣ ಭಾಗಿಯಾಗಿ ಕಾವೇರಿ ಹೋರಾಟ ಬೆಂಬಲಿಸಿದರು. ಕಾವೇರಿ ನದಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರದ ನಿರ್ಲಕ್ಷೃ ಮುಂದುವರೆದಿದ್ದು, ವಾಮಮಾರ್ಗದ ಮೂಲಕ ನೀರು ಬಿಡುತ್ತಿರುವುದರ ಜತೆಗೆ ಸದನದಲ್ಲಿ ಚರ್ಚೆ ಮಾಡದೆ ರೈತರಿಗೆ ದ್ರೋಹ ಮಾಡಿದೆ ಎಂದು ಕಿಡಿಕಾರಿದರು.

ಧರಣಿಯಲ್ಲಿ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಬೋರಯ್ಯ, ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಂ, ರೈತ ಸಂಘದ ಇಂಡುವಾಳು ಚಂದ್ರಶೇಖರ್, ಕನ್ನಡಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಮುದ್ದೇಗೌಡ, ಜೈ ಕರ್ನಾಟಕ ಪರಿಷತ್‌ನ ರಾಜ್ಯಾಧ್ಯಕ್ಷ ಎಸ್.ನಾರಾಯಣ್, ಮಲ್ಲೇಶ್, ಸುಶೀಲಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net