

ಮೈಸೂರು: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ಕ್ರಮವನ್ನು ವಿರೋಧಿಸಿ ಕಾವೇರಿ ಕ್ರಿಯಾ ಸಮಿತಿಯಿಂದ ನಗರದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಯಿತು.
ಪ್ರತಿ ಶುಕ್ರವಾರ ಪ್ರತಿಭಟನೆ ನಡೆಸಲು ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ನಗರದ ದೊಡ್ಡ ಗಡಿಯಾರ ವೃತ್ತದಲ್ಲಿ ಸಹಿ ಸಂಗ್ರಹ, ಮಾನವ ಸರಪಳಿ ಮೂಲಕ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಲಾಯಿತು.
ಈ ಹೋರಾಟಕ್ಕೆ ಬೆಂಬಲ ಸೂಚಿಸಿದ ಕನ್ನಡಾಂಬೆ ರಕ್ಷಣಾ ವೇದಿಕೆಯ ಅಧ್ಯಕ್ಷ ರಾಜಶೇಖರ್, ಎಚ್.ಕೆ.ರಾಮು, ಸಮಿತಿಯ ಎಸ್.ಜಯಪ್ರಕಾಶ್, ವಿಜಯಲಕ್ಷ್ಮೀ, ಮಂಜುಳಾ, ಭಾಗ್ಯಮ್ಮ, ಪುಷ್ಪಾವತಿ, ವಿಜಯಕುಮಾರ್ ಇನ್ನಿತರರಿದ್ದರು.