ಕಾಂಗ್ರೆಸ್ ಸದೆಬಡಿಯಲು ಸಿಬಿಐ ದುರ್ಬಳಕೆ: ಸಿರಾಜ್ ಶೇಖ್

IMG_20230405_124918.jpg
Published on

ಹೊಸಪೇಟೆ: ವಿಧಾನಸಭೆ ಚುನಾವಣಾ ಹೊಸ್ತಿಲಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು, ಆಕಾಂಕ್ಷಿಗಳು, ಬೆಂಬಲಿಗರನ್ನು ಬೆದರಿಸಲು ಕೇಂದ್ರದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ಈ ಮೂಲಕ ಕಾಂಗ್ರೆಸ್ಸಿಗರ ಮನೋಬಲ ಕುಗ್ಗಿಸಲು ಯತ್ನಿಸುತ್ತಿದೆ. ಆದರೆ, ಇಂತಹ ಪೊಳ್ಳು ಬೆದರಿಕೆಗಳಿಗೆ ಕಾಂಗ್ರೆಸ್ ಯಾವತ್ತೂ ಜಗ್ಗುವುದಿಲ್ಲ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಮಾಜಿ ಶಾಸಕ ಸಿರಾಜ್ ಶೇಖ್ ತಿರುಗೇಟು ನೀಡಿದ್ದಾರೆ.
ಈ ಕುರಿತು ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕೇಂದ್ರದ ಬಿಜೆಪಿ ಸರ್ಕಾರ ಇಡಿ, ಸಿಬಿಐ, ಐಟಿಯಂಥ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳು, ಬೆಂಬಲಗರು, ಹಿತೈಷಿಗಳನ್ನು ಬೆದರಿಸುವ ಕೆಲಸಕ್ಕೆ ಮುಂದಾಗಿದೆ. ಈ ಮೂಲಕ ಅವರನ್ನು ಈ ಬಾರಿ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿಯುವಂತೆ ಮಾಡುವುದು, ಹೆದರಿಕೆಯ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದೆ.
ತನಿಖಾ ಸಂಸ್ಥೆಗಳ ದಾಳಿ ಮೂಲಕ ಕಾಂಗ್ರೆಸ್ಸಿಗರ ಬಗ್ಗೆ ಸಮಾಜದಲ್ಲಿ ತಪ್ಪು ಕಲ್ಪನೆ ಮೂಡಿಸುವ ಹುನ್ನಾರ ನಡೆಸಿದೆ. ಆದರೆ, ಇಂತಹ ಪ್ರಯತ್ನಕ್ಕೆ ಜನರು ಮಣೆ ಹಾಕುವುದಿಲ್ಲ.
ಈ ರೀತಿಯ ದುಷ್ಕೃತ್ಯದ ಬಗ್ಗೆ ಕಾಂಗ್ರೆಸ್ಸಿಗರು ಹೆದರುವ ಅಗತ್ಯವಿಲ್ಲ. ಇದರಿಂದ ಬಿಜೆಪಿಗೂ ಯಾವುದೇ ಲಾಭವಾಗುವುದಿಲ್ಲ. ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಎಲ್ಲ ಕಾಂಗ್ರೆಸ್ಸಿಗರು ಒಟ್ಟಾಗಿದ್ದು, ಎಲ್ಲ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಪ್ರತ್ನಿಸುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net